ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ: ಕಡೇಮನಿ

0
57
loading...

ಕನ್ನಡಮ್ಮ ಸುದ್ದಿ-ಕುಷ್ಟಗಿ : ಕ್ರೀಡೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವ ಸಕಾರಾತ್ಮಕ ಮನೋಭಾವ ಮುಖ್ಯ ಎಂದು ಲಿಂಗದಳ್ಳಿ ಸ.ಪ್ರೌ.ಶಾಲೆಯ ಮುಖ್ಯೋಪಾಧ್ಯಯ ವೈ.ಹೆಚ್. ಕಡೇಮನಿ ಹೇಳಿದರು.
ತಾಲೂಕಿನ ಲಿಂಗದಳ್ಳಿ ಗ್ರಾಮದ ಸರಕಾರಿ ಪ್ರೌಡಶಾಲೆಯಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಹಾಗೂ ಶಾರದಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕುಷ್ಟಗಿ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಮೀಣ ಕ್ರೀಡೋತ್ಸವದಲ್ಲಿ ಮಾತನಾಡುತ್ತಾ ಮಕ್ಕಳು ಇಂದಿನ ಆಧುನಿಕ ಪ್ರಪಂಚದಲ್ಲಿ ಬರೀ ಕ್ರಿಕೆಟ್, ಟೆನ್ನಿಸ್ ಎಂದು ಅಂಟಿಕೊಳ್ಳುತ್ತಿದ್ದಾರೆ. ನಮ್ಮ ಗ್ರಾಮೀಣ ಮಟ್ಟದ ಕ್ರೀಡೆಗಳಾದ ಗೋಣೀಚೀಲ ಓಟ, ಹಗ್ಗ ಜಗ್ಗದಾಟ, ಸೈಕಲ್ ಸ್ಪರ್ದೆ ಸೇರಿದಂತೆ ಅನೇಕ ಕ್ರೀಡೆಗಳನ್ನು ಮೈಗೂಡಿಸಿಕೊಳ್ಳಬೇಕು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಇದರಿಂದ ಮಕ್ಕಳ ಪಠ್ಯದ ಜೊತೆ ಕ್ರೀಡೆಯಲ್ಲಿಯೂ ಭಾಗವಹಿಸಿ ತಮ್ಮ ಸೃಜನಶಿಲತೆಯನ್ನು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.
ನಂತರ ಶಾರದಾ ಸಂಸ್ಥೆಯ ಮುಖ್ಯಸ್ಥ ಪ್ರಕಾಶ ಬೆದವಟ್ಟಿ ಮಾತನಾಡಿದರು. ತದ ನಂತರ ಶಾಲಾ ಮಕ್ಕಳಿಗೆ ಹಗ್ಗ ಜಗ್ಗಾಟ, ಸೈಕಲ್ ಸ್ಪರ್ದೆ, ಗೋಣಿಚೀಲ ಓಟ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್ಡಿಎಂಸಿ ಅಧ್ಯಕ್ಷ ಪಂಪಾಪತಿ ಎಮ್ಮಿ ನೆರವೇರಿಸಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕ ನಾಗರಾಜ, ಪ್ರಕಾಶ ಮ್ಯಾಗೇರಿ, ನದಾಫ್, ಲಕ್ಷ್ಮೀ ಐಲಿ, ಶಾಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು. ನಂತರ ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ನಗದು ಮತ್ತು ಪ್ರಮಾಣ ಪತ್ರ ನೀಡಲಾಯಿತು.

loading...