2ಆರ್‌ಎಂಡಿ.4 ರಾಮದುರ್ಗ: ನೌಕರಿ ಉದ್ದೇಶಕ್ಕೆ ಮಾತ್ರ ಪಾ

0
27
loading...

12ಆರ್‌ಎಂಡಿ.4
ರಾಮದುರ್ಗ: ನೌಕರಿ ಉದ್ದೇಶಕ್ಕೆ ಮಾತ್ರ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಬೇಡ, ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಗಳನ್ನು ಗುರುತಿಸಿ ಸ್ವತಂತ್ರವಾಗಿ ತಮ್ಮ ಜೀವನ ರೂಪಿಸಿಕೊಳ್ಳುವಂತಹ ಕೌಶಲ್ಯಭರಿತ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಸಂಸದ ಸುರೇಶ ಅಂಗಡಿ ತಿಳಿಸಿದರು.
ಸ್ಥಳೀಯ ಸಿ.ಎಸ್‌.ಬೆಂಬಳಗಿ ಮಹಾವಿದ್ಯಾಲಯದ ಆವರಣದಲ್ಲಿ ಬುಧವಾರ ಏರ್ಪಡಿಸಿದ ವಿದ್ಯಾ ಪ್ರಸಾರಕ ಸಮಿತಿಯ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜನತೆಗಿಂದು ವಾಸ್ತವದ ಅರಿವು ಮೂಡಿಸುವ ಅವಶ್ಯಕತೆ ಇದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ಕಾರ್ಯಗತಗೊಳಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಆದ್ದರಿಂದ ಭಾರತದ ಪ್ರತಿಯೊಬ್ಬ ನಾಗರಿಕರು ಅವರ ಚಿಂತನೆಗಳಿಗೆ ಸ್ಪಂದಿಸಬೇಕು. ಅಂದಾಗ ಮಾತ್ರ ದೇಶದ ಪ್ರಗತಿ ಸಾಧ್ಯವಾಗುತ್ತದೆ ಎಂದರು.
ಸಾನಿಧ್ಯ ವಹಿಸಿದ್ದ ಡಂಬಳ ಎಡೆಯೂರು ಜಗದ್ಗುರು ತೋಂಟದಾರ್ಯ ಮಠದ ಶ್ರೀ ಡಾ| ತೋಂಟದ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಪಿ.ಎಂ. ಜಗತಾಪ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥಾಪಕ ಸದಸ್ಯರಾದ ಎಸ್‌.ಎಸ್‌. ಪಾಟೀಲ, ಬಿ.ವಿ.ಪಟ್ಟನಶೆಟ್ಟಿ, ಗೌರವ ಕಾರ್ಯದರ್ಶಿ ಎಸ್‌.ಐ.ಪುರಾಣಿಕ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಂ.ಬಿ.ಪಾಟೀಲ ಸ್ವಾಗತಿಸಿದರು. ಪ್ರೊ| ಎಸ್‌. ಎಂ. ನಾಯಕ್‌, ಗೀತಾ ಅರಟಗಿಮಠ ಹಾಗೂ ಸುಧಾ ಕೆರೂರ ನಿರೂಪಿಸಿದರು. ಪ್ರೊ| ಎಸ್‌. ಎಂ. ಸಕ್ರಿ ವಂದಿಸಿದರು.
ಪೋಟೊ ಶೀರ್ಷಿಕೆ: 12ಆರ್‌ಎಂಡಿ.4
ರಾಮದುರ್ಗ: ವಿದ್ಯಾ ಪ್ರಸಾರಕ ಸಮಿತಿಯ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಸಂಸದ ಸುರೇಶ ಅಂಗಡಿ ಮಾತನಾಡಿದರು.

loading...

LEAVE A REPLY

Please enter your comment!
Please enter your name here