ನ್ಯಾಷನಲ್ ಸ್ಕೂಲ್‍ನಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕಾ ಕಾರ್ಯಕ್ರಮ ಯಶಸ್ವಿ

0
29
loading...

ಕನ್ನಡಮ್ಮ ಸುದ್ದಿ-ಗಂಗಾವತಿ : ಪಟ್ಟಣದ ಪ್ರತಿಷ್ಟಿತ ನ್ಯಾಷನಲ್ ಸ್ಕೂಲ್‍ನಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಸರಕಾರದ ಮಹತ್ವಾಕಾಂಕ್ಷಿ ದಡಾರ ಮತ್ತು ರುಬೆಲ್ಲಾ ಲಸಿಕಾ ನೀಡಿಕೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಶಾಲೆಯ ಎಲ್.ಕೆ.ಜಿ, ಯುಕೆ.ಜಿ, ಸೇರಿದಂತೆ 5ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆ ನೀಡಲಾಯಿತು.
ಈ ಲಸಿಕೆ ಎರಡು ಮಾರಕ ರೋಗಗಳಿಂದ ಮಕ್ಕಳಿಗೆ ರಕ್ಷಣೆ ಒದಗಿಸಲಿದೆ. ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿ ಸರಕಾರದ ಈ ಮಹತ್ವದ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ ಎಂದು ವೈದ್ಯರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕರ್ತೆಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಸುವಲ್ಲಿ ಸಹ ಶಿಕ್ಷಕರು ಸಾಥ್ ನೀಡಿದರು.

loading...