ಬೂದಗುಂಪಾ ಪ್ರೌಢ ಶಾಲೆಯಲ್ಲಿ ಅರಿವಿನ ಸಿಂಚನ ಕಾರ್ಯಕ್ರಮ ಯಶಸ್ವಿ

0
43
loading...

ಕನ್ನಡಮ್ಮ ಸುದ್ದಿ-ಗಂಗಾವತಿ : ಸಮೀಪದ ಬೂದಗುಂಪಾ ಸರಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಅಂಗವಿಕಲರಿಗೆ ಸರಕಾರದ ಸೌಲಭ್ಯಗಳ ಮಾಹಿತಿಯನ್ನು ವಿದ್ಯಾರ್ಥಿಗಳಿಗಳ ಮೂಲಕ ತಿಳಿಸುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಅರಿವಿನ ಸಿಂಚನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದ ಉದ್ದೇಶ ಕುರಿತು ತಾಲೂಕು ವಿವಿದೋದ್ದೇಶ ಕಾರ್ಯಕರ್ತೆ(ಎಂ.ಆರ್.ಡಬ್ಲು)ಮಂಜುಳಾ ಮಾತನಾಡಿ, ಪ್ರಸ್ತುತ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರ ಸರ್ವಾಂಗೀಣ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸುತ್ತಿದ್ದು, ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಲು ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ಒಬ್ಬೊಬ್ಬ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಪ್ರತಿ ತಾಲೂಕು ಮಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿ, ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಸರಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದ ಅವರು, ಈ ಕಾರ್ಯಕ್ರಮದ ಮೂಲ ಉದ್ದೇಶ ವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ ಸಂಪೂರ್ಣವಾಗಿ ಸರಕಾರದ ಯೋಜನೆಗಳು ಸಿಗಬೇಕೆಂಬುದಾಗಿದೆ ಎಂದರು.
ಯರಡೋಣಾ ಗ್ರಾ.ಪಂ.ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಸೋಮಶೇಖರಗೌಡ ಮಾತನಾಡಿ, ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿದ್ಯಾರ್ಥಿಗಳ ಮೂಲಕ ಮಾಹಿತಿ ಒದಗಿಸುವ ಈ ಮಹತ್ವಾಕಾಂಕ್ಷಿ ಯೋಜೆನಯಾದ ಅರಿವಿನ ಚಿಂಚನ ಕಾರ್ಯಕ್ರಮವನ್ನು ಕಾರಟಗಿ ಹೋಬಳಿಯ ವ್ಯಾಪ್ತಿಯ ಬೂದಗುಂಪಾ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವುದು ವಿಶೇಷ. ತಾಲೂಕಿನ 5 ಪ್ರೌಢಶಾಲೆ ಹಾಗೂ 5 ಕಾಲೇಜುಗಳನ್ನು ಈ ಯೋಜನೆಯಲ್ಲಿ ಆಯ್ಕೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ತಮ್ಮ ಗ್ರಾಮದಲ್ಲಿರುವ ವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ ಸರಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡುವಂತೆ ಅವರು ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾರಿ ಮುಖ್ಯ ಶಿಕ್ಷಕಿ ಗಾಯತ್ರಿ ಆರ್.ಪವಾರ್ ವಹಿಸಿದ್ದರು.
ಬೂದಗುಂಪಾ ಗ್ರಾ.ಪಂ. ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ನಾಗರಾಜ, ಬೇವಿನಾಳ ಗ್ರಾ.ಪಂ. ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಶಿವಕುಮಾರ, ಶಿಕ್ಷಕರಾದ ವೇದಾವತಿ, ಸುಮಂಗಲಾ ಕೆ, ಎಸ್ತೇರರಾಣಿ, ಕೆ. ಸಿರವಾರ, ವೆಂಕಟೇಶ, ದಾನೇಶ್ವರಿ, ಸೂಗುರೇಶ, ಶಾಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

loading...