ಎಚ್‍ಐವಿ ಸೋಂಕಿತರನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಮಾಡಬೇಕು: ಡಿಸಿ

0
32
loading...

ಕನ್ನಡಮ್ಮ ಸುದ್ದಿ
ಬೆಳಗಾವಿ : ಎಚ್‍ಐವಿ ಸೋಂಕಿತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಅವರಿಗೆ ಸ್ವ ಉದ್ಯೋಗ ನಡೆಸಲು ಪೆÇ್ರೀತ್ಸಾಹಿಸಲು ಮಹಿಳಾ ಸ್ವ ಸಹಾಯ ಸಂಘಗಳ ಮೂಲಕ ಆರ್ಥಿಕ ಸೌಲಭ್ಯ ಕಲ್ಪಿಸಿ ಕೊಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎನ್.ಜಯರಾಮ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕ ಆಯೋಜಿಸಿದ್ದ ಏಕಗವಾಕ್ಷಿ ಯೋಜನೆ ಮತ್ತು ಎಚ್‍ಐವಿ, ಟಿಬಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಎಚ್‍ಐವಿ ಸೋಂಕಿತರು ಸರ್ಕಾರಗಳ ವಿವಿಧ ಸೌಲಭ್ಯಗಳಿಂದ ವಂಚಿತರಾಗದಂತೆ ಎನ್‍ಜಿಐ ಹಾಗೂ ಸಂಬಂಧಪಟ್ಟ ಇಲಾಖೆ ಅ„ಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಎನ್‍ಜಿಒಗಳ ಸಮೀಕ್ಷೆ ವರದಿ ಪ್ರಕಾರ 2910 ಎಚ್‍ಐವಿ ಸೋಂಕಿತರಿದ್ದಾರೆ. ಇವರೆಲ್ಲರ ಆರ್ಥಿಕ ಸ್ಥೀತಿಗತಿ, ಉದ್ಯೋಗ ಹಾಗೂ ಕುಟುಂಬ ನಿರ್ವಹಣೆ ಹೇಗೆ ನಡೆಸುತ್ತಿರುವುದು. ಜತೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಜನರು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅವರ ಆರೋಗ್ಯದ ಸ್ಥೀತಿಗತಿ ಬಗ್ಗೆ ಖುದ್ದಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಎಚ್‍ಐವಿ ಸೋಂಕಿತರ ಮಾರ್ಯದೆಗೆ ಹೆದರಿ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಹಿಂಜರಿಯುತ್ತಿದ್ದಾರೆ ಅಂತಹವರಿಗೆ ವಿಶೇಷ ಕೌನ್ಸಲಿಂಗ್ ನಡೆಸಿ ಧೈಯ ತುಂಬ ಕೆಲಸವನ್ನು ಎನ್‍ಜಿಒ, ಆರೋಗ್ಯ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.
ಎಚ್‍ಐವಿ ಸೋಂಕಿತರ ಸಂಬಂಧಿಸಿದ ದಾಖಲೆಗಳೆಲ್ಲವೂ ಗೌಪ್ಯವಾಗಿಡಬೇಕು. ಯಾವುದೇ ದಾಖಲೆ ಬಹಿರಂಗವಾಗಿ ನೀಡದೆ ಅವರನ್ನು ಗೌಪ್ಯವಾಗಿ ಗುರುತಿಸಿ ಅವರಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಿ. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಸಮಾಜದಲ್ಲಿ ಎಲ್ಲರಂತೆ ಬದಕಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ 2540 ಅಧಿಕ ಲಿಂಗತ್ವ ಅಲ್ಪಸಂಖ್ಯಾತರು (ತೃತೀಯಲಿಂಗಿಗಳು) ಇರುವುದು ಸಮೀಕ್ಷೆ ವರದಿಯಿಂದ ದೃಢವಾಗಿದೆ ಎಂದು ಸಭೆಯಲ್ಲಿ ಎನ್‍ಜಿಓಗಳ ಪ್ರಸ್ತಾಪಕ್ಕೆ ಜಿಲ್ಲಾಧಿಕಾರಿ ಎನ್.ಜಯರಾಮ್ ಅನುಮಾನ ವ್ಯಕ್ತಪಡಿಸಿದರು.
ಸರ್ಕಾರದ ಸೌಲಭ್ಯಕ್ಕಾಗಿ ಅಂಕಿ-ಸಂಖ್ಯೆಗಳನ್ನು ಹೆಚ್ಚಿಗೆ ತೋರಿಸಬೇಡಿ. ಲೈಂಗೀತ ಕಾರ್ಯಕರ್ತೆಯರನ್ನು ಇದರಲ್ಲಿ ಸೇರಿಸಬೇಡಿ. ಜಿಲ್ಲೆಯಲ್ಲಿ ಇಷ್ಟು ಪ್ರಮಾಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಇರಲು ಸಾಧ್ಯವಾವಿಲ್ಲ. ಹಾಗಾಗಿ ಎನ್‍ಜಿಒಗಳು ನೀಡಿರುವು ವರದಿ ಸತ್ಯಕ್ಕೆ ದೂರವಾಗಿದ್ದು, ಇನ್ನೋಮ್ಮೆ ಪರಿಶೀಲನೆ ನಡೆಸಿ ಮಾಹಿತಿ ಸಲ್ಲಿಸುವಂತೆ ಆರೋಗ್ಯ ಇಲಾಖೆಗೆ ಡಿಸಿ ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಉಮಾ ಸಾಲಿಗೌಡರ, ಜಿಪಂ ಯೋಜನಾ ನಿರ್ವಹಣಾಧಿಕಾರಿ ಎ.ಎಸ್.ದೊಡಮನಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಗಡಾದಿ ಸೇರಿದಂತೆ ಮೊದಲಾದವರು ಹಾಜರಿದ್ದರು.

loading...