ಕಾಂಗ್ರೇಸ್‍ಗೆ ಗುಡ್ ಬೈ ಹೇಳಿದ ಮಾಜಿ ಶಾಸಕ ಜೆ.ಡಿ.ನಾಯ್ಕ

0
22
loading...

ಕನ್ನಡಮ್ಮ ಸುದ್ದಿ-ಭಟ್ಕಳ : ಕಾಂಗ್ರೇಸ್‍ನ ಮಾಜಿ ಶಾಸಕ ಜೆ.ಡಿ.ನಾಯ್ಕ ಶುಕ್ರವಾರ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ಶುಕ್ರವಾರ ತಮ್ಮ ಬೆಂಬಲಿಗರೊಂದಿಗೆ ನಗರದ ಖಾಸಗಿ ಹೊಟೇಲನಲ್ಲಿ ಕರೇದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಪಕ್ಷ ತಮ್ಮನ್ನು ಕಡೆಗಣಿಸುವುದರಿಂದ ಬೇಸತ್ತು ರಾಜಿನಾಮೆ ನೀಡುತ್ತಿರುವುದಾಗಿ ತಿಳಿಸಿದರು. ಕಳೇದ ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೆನೆ ಪಕ್ಷಕ್ಕೆ ದ್ರೋಹವೆಸಗದೇ ನಿಷ್ಠಾವಂತನಾಗಿ ಕೆಲಸ ಮಾಡಿದ್ದೇನೆ. ಆದರೂ ಕೂಡ ಪಕ್ಷದಿಂದ ನನ್ನನ್ನು ಕಡೆಗಣಿಸಲಾಗಿದೆ. ಜಿಪಂ ತಾಪಂ ಚುಣಾವಣೆ ವೇಳೆ ನನನ್ನ ಜೊತೆಗಾರರ ಯಾದಿಯನ್ನ ಪಡೆದುಕೊಂಡು ಟಿಕೇಟ್ ನೀಡದೇ ವಂಚಿಸಲಾಗಿದೆ. ಹಾಗಾಗಿ ಪಕ್ಷದ ವರ್ತನೆಯಿಂದ ಬೇಸತ್ತು ರಾಜಿನಾಮೆ ಸಲ್ಲಿಸಸುತ್ತಿರುವುದಾಗಿ ತಿಳಿಸಿದರು.
ರಾಜಿನಾಮೆ ನಂತರ ಬಿಜೆಪಿ ಸೇರ್ಪಡೆಯಾಗುತ್ತೀರಾ ? ಎಂಬ ಪರ್ತಕರ್ತರ ಪ್ರಶ್ನೆಗೆ ಪ್ರತಿಕ್ರೀಯಿಸದ ಅವರು ಈ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ತಿಳಿಸಿದರು. ಬೆಳ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ರಮೇಶ ನಾಯ್ಕ, ಸುಬ್ರಾಯ ನಾಯ್ಕ, ಸಚಿನ್ ನಾಯ್ಕ, ನಾಗೇಶ ದೇವಾಡಿಗ, ಬೈರುಮನೆ, ವಿಜಯಕುಮಾರ ನಾಯ್ಕ, ಮಹೇಶ ನಾಯ್ಕ, ಎಂಎಂ ನಾಯ್ಕ ಮುಂತಾದವರು ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

loading...