ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

0
25
loading...

ಕನ್ನಡಮ್ಮ ಸುದ್ದಿ-ಬೆಳಗಾವಿ 3: ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ ಹಾಗೂ ವಿವಿಧ ಸಂಸ್ಥೆಗಳಿಂದ ರೈತರು ಪಡೆದ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು ಹಾಗೂ ಒತ್ತಾಯದ ಸಾಲ ವಸೂಲಿ ಮಾಡದಂತೆ ಕ್ರಮಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿ ಮನವಿ ಸಲ್ಲಿಸಿದರು.

ನಗರದ ಬೋಗಾರವೇಸ್ ವೃತ್ತದಿಂದ ಆರಂಭವಾಗ ಪ್ರತಿಭಟನಾ ರ್ಯಾಲಿ ಕಾಲೇಜು ರಸ್ತೆ, ಚನ್ನಮ್ಮ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಸತತ ಬರಗಾಲದಿಂದ ರೈತರು ಸಂಕಷ್ಟದಲ್ಲಿ ಸುಳಿಗೆ ಸಿಲುಕಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಾಲಮನ್ನಾ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡದೇ ರೈತ ವಿರೋಧಿ ಬಜೆಟ್ ಮಂಡನೆ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಖಾನಾಪುರ ತಾಲೂಕಿನ ಅರಣ್ಯ ಪ್ರದೇಶ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿನ ಬೆಳೆಗಳಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಸ್ವಲ್ಪ ಪ್ರಮಾಣದಲ್ಲಿ ಬೆಳೆಗಳಿಗೆ ಹಾನಿಯುಂಟಾಗುತ್ತಿರುವುದರಿಂದ ತಕ್ಷಣ ಬೆಳೆಗಳಿಗೆ ರಕ್ಷಣೆ ನೀಡುವುದು ಮತ್ತು ಸರ್ಕಾರಿ ನಕ್ಷೆಯಂತೆ ಜಮೀನುಗಳ ಸಂಪರ್ಕ ರಸ್ತೆಗಳನ್ನು ನಿರ್ಮಾಣ ಮಾಡಬೇಕು. 2016-17 ನೇ ಸಾಲಿನ ಬೆಳೆ ನಷ್ಟ ಪರಿಹಾರವನ್ನು ತಕ್ಷಣ ರೈತರ ಖಾತೆಗೆ ನೇರವಾಗಿ ಜಮಾ ಮಾಡುವುದು ಹಾಗೂ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗ„ಗೊಳಿಸಬೇಕು. ಬರನಿರ್ವಹಣೆ ಮತ್ತು ಕುಡಿಯುವ ನೀರಿನ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು. ಪಂಪಸೆಟ್‍ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ನರೇಗಾದಲ್ಲಿ ನಡೆದ ಅವ್ಯವಹಾರ ತನಖೆಗೆ ಒಳಪಡಿಸುವುದು, ರೈತರ ಜಮೀನುಗಳಿಗೆ ಕೂಲಿ ಕಾರ್ಮಿಕರನ್ನು ನೀಡಬೇಕೆಂದು ಒತ್ತಾಯಿಸಿದರು.

ಡಾ.ಕಸ್ತೂರಿ ರಂಗನ್ ವರದಿಯ ಸೂಕ್ಷ್ಮ ಪರಿಸರ ವಲಯದ ಕರಡು ಅಧಿಸೂಚನೆ ತಡೆಹಿಡಿಯಬೇಕು ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರ್ಮಿಸಲಾಗಿರುವ ಟೋಲ್‍ನಾಕಾದಲ್ಲಿ ರೈತರ ಕೃಷಿಯೇತರ ವಾಹನಗಳಿಗೆ ಶುಲ್ಕ ವಿನಾಯಿತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ, ಜಿಲ್ಲಾಧ್ಯಕ್ಷ ದುಂಡಯ್ಯ ಪೂಜಾರ, ರಾಜ್ಯ ಉಪಾಧ್ಯಕ್ಷ ಜಯಪ್ಪ ಬಸರಕೋಡ, ಜಿ.ಎಲ್ ಹುಳ್ಳೇರ, ಪುಂಡಲಿಕ ಉಳ್ಳಾಗಡ್ಡಿ, ದೇವೆಂದ್ರ ಹಂಚಿನಮನಿ, ಸಂಜು ಸೋನವಾಲಕರ, ಪ್ರದೀಪ ಸಾಣಿಕೊಪ್ಪ, ಈರಣಗೌಡ ಪಾಟೀಲ, ವೀರಯ್ಯ ಪೂಜಾರ ಮೊದಲಾದವgರು ಭಾಗವಹಿಸಿದ್ದರು.

loading...