ಸಂಶಯಾಸ್ಪದವಾಗಿ ನೇಣು ಬಿಗಿದು ಯುವಕ ಆತ್ಮಹತ್ಯೆ

0
27
loading...

ಕನ್ನಡಮ್ಮ ಸುದ್ದಿ-ಮುಂಡಗೋಡ : ಪಟ್ಟಣದ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯೆ ರಾತ್ರಿ ಸಂಬವಿಸಿದೆ.
ತಾಲೂಕಿನ ಕರಗಿನಕೋಪ್ಪ ಗ್ರಾಮದ ಕೃಷ್ಣ ಸುರೇಶ ಲಮಾಣಿ(20) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ. ಹಲವು ವರ್ಷಗಳಿಂದ ಪಟ್ಟಣದ ಬಸ್ ನಿಲ್ದಾಣದೆದುರಿನ ನ್ಯೂ ಪರಾಗ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಎಂದಿನಂತೆ ಸೋಮವಾರ ರಾತ್ರಿ ವರೆಗೂ ಕೆಲಸ ಮಾಡಿ ಹೋಟೆಲ್ ಮಹಡಿ ಮೇಲಿನ ವಿಶ್ರಾಂತಿ ಕೊಠಡಿಗೆ ಹೋಗಿ ನೇಣು ಬೀಗಿದುಕೊಂಡಿದ್ದಾನೆ ಎನ್ನಲಾಗಿದೆ. ಸಹಪಾಠಿಗಳು ಈತನನ್ನು ಹುಡುಕಿಕೊಂಡು ಹೋದಾಗ ನೇಣು ಬೀಗಿದುಕೊಂಡ ಸ್ಥಿತಿಯಲ್ಲಿದ್ದ, ಈತನನ್ನು ತಕ್ಷಣ ಮುಂಡಗೋಡ ತಾಲೂಕಾ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಿ ಪ್ರಾಣಪಕ್ಷಿ ಹಾರಿಹೋಗಿತ್ತು. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕೆ: ತೀವ್ರ ಕ್ರಿಯಾಶೀಲವಾಗಿ ಕೆಲಸ ಮಾಡಿಕೊಂಡಿದ್ದ ಈತ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವುದರ ಬಗ್ಗೆ ಸಾರ್ವಜನಿಕರು ತೀವ್ರ ಸಂಶಯ ವ್ಯಕ್ತಪಡಿಸುತ್ತಿದ್ದು, ಪೊಲೀಸರು ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯಾಂಶ ಹೊರಹಾಕಬೇಕು ಎಂಬುವುದು ಸಾರ್ವಜನಿಕರ ಒತ್ತಾಯವಾಗಿದೆ.

loading...