ಖಾನಾಪುರದಲ್ಲಿ ಬಿಜೆಪಿ ಪದಾಧಿಕಾರಿಗಳ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕ ವಿ.ಐ ಪಾಟೀಲ ಕರೆ
ಕನ್ನಡಮ್ಮ ಸುದ್ದಿ-ಖಾನಾಪುರ: ಲ, ಬೆಳಗಾವಿ ಜಿಲ್ಲೆಯ ಗೋಕಾಕ, ರಾಮದುರ್ಗ, ಖಾನಾಪುರ, ಕಿತ್ತೂರು ಮತ್ತು ಬೆಳಗಾವಿ ನಗರ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಈಗಿರುವ ಕಾರ್ಯಕರ್ತರ ಪಡೆಯನ್ನು ಮತ್ತಷ್ಟು ಬಲಪಡಿಸಬೇಕು. ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷ ಸಂಘಟನೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಪಕ್ಷದ ಜಿಲ್ಲಾಧ್ಯಕ್ಷ ಡಾ.ವಿ.ಐ ಪಾಟೀಲ ಕರೆ ನೀಡಿದರು.
ಪಟ್ಟಣದ ಲೋಕಮಾನ್ಯ ಸಭಾಗೃಹದಲ್ಲಿ ಸೋಮವಾರ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಷೇತ್ರದ ಕಾರ್ಯಕರ್ತರು ಈಗಿನಿಂದಲೇ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮತ್ತು ಪ್ರಧಾನಿ ಮೋದಿ ಅವರ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ಮಾಹಿತಿ ನೀಡಲು ಮುಂದಾಗಬೇಕು ಎಂದು ಕರೆ ನೀಡಿದರು.
ಸಭೆಯನ್ನು ಪಕ್ಷದ ಸಂಸದ ಅನಂತಕುಮಾರ ಹೆಗಡೆ, ಮಾಜಿ ಶಾಸಕ ಪ್ರಹ್ಲಾದ ರೇಮಾಣಿ, ಮುಖಂಡರಾದ ಸುಭಾಸ ಗುಳಶೆಟ್ಟಿ, ಬಾಬಣ್ಣ ಪಾಟೀಲ, ಪ್ರಮೋದ ಕೊಚೇರಿ, ಜಿತೇಂದ್ರ ಮಾದಾರ, ವಿಠ್ಠಲ ಹಲಗೇಕರ ಮತ್ತಿತರರು ಉದ್ಘಾಟಿಸಿದರು.
ಪಕ್ಷದ ಬ್ಲಾಕ್ ಅಧ್ಯಕ್ಷ ವಿಠ್ಠಲ ಪಾಟೀಲ ಕಾರ್ಯಕಾರಿಣಿಯ ಅಧ್ಯಕ್ಷತೆಯನ್ನು ವಹಿಸಿದ್ದರು. ಅಪ್ಪಯ್ಯ ಕೋಡೊಳಿ, ವಿರೇಶ ದೇವರಮನಿ, ಸಂಜಯ ಕಂಚಿ, ಸಂಜಯ ಕುಬಲ, ಬಾಬುರಾವ ದೇಸಾಯಿ, ಅಶೋಕ ಚಲವಾದಿ, ಬಾಬಣ್ಣ ಪಾಟೀಲ ಮತ್ತಿತರರು ಇದ್ದರು.
ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಯ ಬಗ್ಗೆ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು. ಪಕ್ಷದ ತಾಲೂಕು ಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
loading...