loading...

ಖಾನಾಪುರ: ಪಟ್ಟಣದಲ್ಲಿ ಇತ್ತೀಚೆಗಷ್ಟೇ ನಿರ್ಮಿಸಲಾದ ಬೆಳಗಾವಿ ಪಣಜಿ ರಾಷ್ಟ್ರೀಯ ಹೆದ್ದಾರಿಯ ದ್ವಿ ಪಥದ ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ಬುಧವಾರ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಅಜೀಂ ತೇಲಗಿ ಚಾಲನೆ ನೀಡಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರೋತ್ಥಾನ ನಿಧಿಯಿಂದ ಮಂಜೂರಾದ 1 ಕೋಟಿ ಅನುದಾನದಡಿ ಬಸವೇಶ್ವರ ವೃತ್ತದಿಂದ ಫಿಶ್ ಮಾರ್ಕೆಟ್‍ವರೆಗೆ ಚರಂಡಿ ನಿರ್ಮಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಅಪ್ಪಯ್ಯ ಕೋಡೊಳಿ, ಮುಖ್ಯಾಧಿಕಾರಿ ಅಶೋಕ ಮಠದ ಸೇರಿದಂತೆ ಪಪಂ ಸದಸ್ಯರು, ಸಿಬ್ಬಂದಿ ಇದ್ದರು.

loading...