ಚಾಂಪಿಯನ್ಸ್ ಟ್ರೋಫಿಗೆ ಸೂಕ್ತ ಭದ್ರತೆ ಬೇಕು

0
53
loading...

ಲಂಡನ್: ಮ್ಯಾಚೆಸ್ಟೆರ್‍ನ ಅರೇನಾದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಿಂದ ಸಾವು ನೋವು ಸಂಭವಿಸಿದ್ದು, ಇದೀಗ ಮುಂದಿನ ದಿನಗಳಲ್ಲಿ ಪ್ರಾರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೇಲೂ ಭಯದ ವಾತಾವರಣ ಆವರಿಸಿದೆ. ಚಾಂಪಿಯನ್ಸ್ ಟ್ರೋಪಿಯಲ್ಲಿ ಪಾಲ್ಗೊಳ್ಳುವ ಭಾರತೀಯ ಕ್ರಿಕೆಟ್ ತಂಡಕ್ಕೆ ಭದ್ರತೆ ಒದಗಿಸಬೇಕೆಂದು ಬಿಸಿಸಿಐ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(Iಅಅ)ಗೆ ಮನವಿ ಮಾಡಿದೆ.
ಜೂನ್ 1 ರಿಂದ ಪ್ರಾರಂಭವಾಗಲಿರುವ ಚಾಂಪಿಯನ್ಸ್ ಟ್ರೋಪಿಯಲ್ಲಿ ಭಾಗವಹಿಸಲು ಈಗಾಗಲೇ ಟೀಂ ಇಂಡಿಯಾ ಸಜ್ಜಾಗಿದೆ. ಆದರೆ, ಮೊನ್ನೆ ನಡೆದ ಬಾಂಬ್ ದಾಳಿ ಹಿನ್ನೆಲೆಯಲ್ಲಿ ಬಿಸಿಸಿಐ ಭಾರತೀಯ ಕ್ರಿಕೆಟ್ ತಂಡದ ಭದ್ರತೆ ಸುರಕ್ಷತೆ ಬಗ್ಗೆ ಆತಂಕಗೊಂಡಿದೆ. ಅಂತೆಯೇ ತಂಡದ ಆಟಗಾರರಿಗೆ ಸೂಕ್ತ ಸಾರಿಗೆ ವ್ಯವಸ್ಥೆ, ಮೂಲ ಸೌಕರ್ಯಗಳ ಜೊತೆಗೆ ಮೈದಾನದಲ್ಲಿ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಐಸಿಸಿಗೆ ಮನವಿ ಮಾಡಿದೆ.

loading...