ಕನ್ನಡಮ್ಮ ಸುದ್ದಿ-ಚಿಕ್ಕೋಡಿ : ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ ವಿಶ್ವ ತಂಬಾಕು ದಿನ 2017 ರ ಅಂಗವಾಗಿ ಜಿಲ್ಲಾ ಮಟ್ಟದ ಬೃಹತ ಜಾಥಾ ಕಾರ್ಯಕ್ರಮವನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯ ಆವರಣದಿಂದ ಹಮ್ಮಿಕೊಳ್ಳಲಾಗಿತ್ತು.
 ಜಾಥಾ ಕಾರ್ಯಕ್ರಮಕ್ಕೆ ಎರಡನೇ ಹೆಚ್ಚುವರಿ ನ್ಯಾಯಾಧೀಶರು  ಮಹಾಂತಪ್ಪಾ ಎ.ಡಿ, ಒಂದನೇಯ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಆನಂದ ಎಮ್. ಹಾಗೂ  ಡಿವಾಯ್‍ಎಸ್‍ಪಿ ಬಿ.ಎಸ್. ಅಂಗಡಿ  ಹಸಿರು ನಿಶಾನೆ ತೋರುವ ಮೂಲಕ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಾಥಾ ಚಿಕ್ಕೋಡಿ ನಗರದ ಬೀದಿಗಳಲ್ಲಿ ಸಂಚರಿಸಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಘೋಷಣೆಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿತು. ಈ ಸಂದರ್ಭದಲ್ಲಿ ತಂಬಾಕು ಮುಕ್ತ ರಾಷ್ಟ್ರವನ್ನಾಗಿಸಲು ಪಣತೊಡಬೇಕೆಂದು ನ್ಯಾಯಾಧೀಶರು ಸಲಹೆ ನೀಡಿದರು.
     ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ. ಅಪ್ಪಾಸಾಹೇಬ ನರಟ್ಟಿ, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ಬಿ.ಎನ್ ತುಕ್ಕಾರ, ತಾಲೂಕಾ ಆರೋಗ್ಯಾಧಿಕಾರಿ ಡಾ. ವ್ಹಿ.ವ್ಹಿ ಶಿಂಧೆ, ಸಿಪಿಐ ಮಲ್ಲನಗೌಡ ನಾಯ್ಕರ, ಪಿಎಸ್‍ಐ ಸಂಗಮೇಶ ದಿಡಗಿನಾಳ ಮುಖ್ಯ ವೈದ್ಯಾಧಿಕಾರಿ ಡಾ. ಎಸ್.ಎಸ್ ಗಡೇದ, ವೈದ್ಯಾಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
loading...