ಪಾಲಿಕೆಗೆ ಅನುದಾನ ನೀಡದಂತೆ ಸರಕಾರಕ್ಕೆ ಪತ್ರ ಬರೆಯಲು ಡಿಸಿ ಸೂಚನೆ

0
141
loading...

ಕನ್ನಡಮ್ಮ ಸುದ್ದಿ
ಬೆಳಗಾವಿ : ಮಹಾನಗರ ಪಾಲಿಕೆಗೆ ತುರ್ತು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಸಕಾಲದಲ್ಲಿ ಹಣ ನೀಡಿದರು ಅದನ್ನು ಖರ್ಚು ಮಾಡದೆ ಹಾಗೇ ಉಳಸಿಕೊಂಡಿರುವುದಕ್ಕೆ ಜಿಲ್ಲಾಧಿಕಾರಿ ಎನ್.ಜಯರಾಮ್ ಅವರು ಪಾಲಿಕೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಮಹಾನಗರ ಪಾಲಿಕೆಗೆ ಅನುದಾನ ನೀಡದಂತೆ ಸರಕಾರಕ್ಕೆ ಪತ್ರ ಬರೆಯುವಂತೆ ಜಿಲ್ಲಾ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಹಾಗೂ ಇನ್ನುಳಿದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಪ್ರದೇಶಗಳಲ್ಲಿ ವಾಸಿಸುವ ಕೂಲಿ ಕಾರ್ಮಿಕರು, ರೈತರ ವಾರ್ಡಗಳಲ್ಲಿ ಮುಂಜಾನೆ ನೀರು ಬಿಡಲು ಕ್ರಮ ಕೈಗೊಳ್ಳಬೇಕು. ಮುಖ್ಯಾಧಿಕಾರಿಗಳು, ಪೌರಾಯುಕ್ತರು, ಪಾಲಿಕೆಯ ಆಯುಕ್ತರು ವಾರ್ಡಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ತಿಳಿದುಕೊಂಡು ಕ್ರಿಯಾ ಯೋಜನೆ ಮಾಡುವಂತೆ ಸೂಚನೆ ನೀಡಿದರು.
ಇನ್ನು ಮಳೆಗಾಲ ಆರಂಭವಾಗಿಲ್ಲ ಚರಂಡಿಗಳ ದುರಸ್ಥಿ ಹಾಗೂ ಸ್ವಚ್ಛತೆಯನ್ನು ಕೈಗೊಳ್ಳಬೇಕು. ಹಿಂದಿನ ವರ್ಷದ ಹಾಗೇ ಮಳೆಗಾಲದಲ್ಲಿ ಅದೇ ಪ್ರದೇಶದಲ್ಲಿ ನೇರೆ ಹಾವಳಿ ಸಂಭವಿಸಿದರೆ ಅದಕ್ಕೆ ಅಧಿಕಾರಿಗಳನ್ನು ಹೊಣೆಗಾರಿಕೆ ಮಾಡಲಾಗವುದು ಎಂದು ಎಚ್ಚರಿಕೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಯೋಜನಾ ನಿರ್ದೇಶಕ ಪ್ರವೀಣ ಬಾಗೇವಾಡಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

loading...