loading...

ಬೆಂಗಳೂರು:-ಕಳೆದ ಕೆಲ ವರ್ಷಗಳಿಂದ ಮಳೆ ಇಲ್ಲದೆ ಜನರು ಕಂಗಾಲಾಗಿದ್ದು ರಾಜ್ಯದಲ್ಲಿ ಬರ ತಾಂಡವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ಈ ಬಾರಿ ಮುಂಗಾರು ಮೇ ಅಂತ್ಯದೊಳಗೆ ಆಗಮನವಾಗಲಿದೆ ಎಂದು ಹೇಳಿದೆ. ಈ ಬಾರಿ ಮಳೆ ಸಾಮಾನ್ಯವಾಗಿರುತ್ತದೆ.
ಕೇರಳ ರಾಜ್ಯದಲ್ಲಿ ಮೇ ಕೊನೆಯ ವಾರದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿದ್ದು , ನೈರುತ್ಯ ಮುಂಗಾರು ಮಳೆ ಪ್ರಾರಂಭವಾಗಲಿದೆಯೇ ಅಥವಾ ವಿಳಂಬವಾಗುತ್ತದೆಯೇ ಎಂಬುದರ ಬಗ್ಗೆ ಇನ್ನು ಖಚಿತ ಸುಳಿವುಗಳಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಮೇ ಅಂತ್ಯದ ವೇಳೆಗೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವುದು ವಾಡಿಕೆ. ಅದರಂತೆ ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ಚಾಮರಾಜನಗರದ ಮೂಲಕ ರಾಜ್ಯವನ್ನು ಪ್ರವೇಶಿಸುವುದು ಕೂಡ ವಾಡಿಕೆ. ಆದರೆ ಈ ಬಾರಿ ಮುಂಗಾರು ಸಕಾಲಕ್ಕೆ ಆರಂಭವಾಗಲಿದೆಯೇ ಅಥವಾ ವಿಳಂಬವಾಗುತ್ತದೆಯೇ ಎಂಬುದು ಇನ್ನು ಖಚಿತವಾಗಿಲ್ಲ. ಈಗಾಗಲೇ ಕರ್ನಾಟಕ ಹಾಗೂ ಕೇರಳ ರಾಜ್ಯಗಳಲ್ಲಿ ಮುಂಗಾರು ಪೂರ್ವ ಮಳೆ ಮುಂದುವರೆದಿದೆ.

loading...