ಮೇ.10 ರಂದು ಹೇಮರಡ್ಡಿ ಮಲ್ಲಮ್ಮ ಅವರ ಜಯಂತ್ಯುತ್ಸವ

0
50
loading...

ಕನ್ನಡಮ್ಮ ಸುದ್ದಿ-ಧಾರವಾಡ- ಮಹಾಸಾಧ್ವಿ,ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಜಯಂತ್ಯುತ್ಸವವನ್ನು ಮೇ.10 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವದು, ವಿವಿಧ ಸಂಘಟನೆಗಳು ಕೈಜೋಡಿಸಿ ಕಾರ್ಯಕ್ರಮ ಅರ್ಥಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿಬೊಮ್ಮನಹಳ್ಳಿ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಸರಕಾರದ ಆದೇಶದಂತೆ ಪ್ರಸಕ್ತ ಸಾಲಿನಿಂದ ಹೇಮರಡ್ಡಿ ಮಲ್ಲಮ್ಮನವರ ಜಯಂತಿಯನ್ನು ಸರಕಾರದಿಂದಲೇ ಆಚರಿಸಲಾಗುತ್ತಿದೆ. ಮೇ.10 ರಂದು ಬೆಳಿಗ್ಗೆ 9 ಗಂಟೆಗೆ ಡಾ.ಮಲ್ಲಿಕಾರ್ಜುನ ಮನಸೂರ ಕಲಾಭವನದಿಂದ ಹೇಮರಡ್ಡಿ ಮಲ್ಲಮ್ಮನವರ ಭಾವಚಿತ್ರದೊಂದಿಗೆ ಬೈಕ್ ರ್ಯಾಲಿ ಮೂಲಕ ಮಾಳಮಡ್ಡಿಯ ರಡ್ಡಿ ಕಾಲನಿಯಲ್ಲಿರುವ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದವರೆಗೆ ತೆರಳಲಾಗುವದು ಎಂದರು.
ಬೆಳಿಗ್ಗೆ 11.30 ಕ್ಕೆ ವೇದಿಕೆ ಕಾರ್ಯಕ್ರಮ,ಉಪನ್ಯಾಸ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಧಾರವಾಡ ಸುತ್ತಮುತ್ತಲಿನ ಪ್ರದೇಶದಲ್ಲಿ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಲು ಹಿರಿಯ ನ್ಯಾಯವಾದಿ ವಿ.ಡಿ.ಕಾಮರಡ್ಡಿ ಕೋರಿದರು. ಸೂಕ್ತ ನಿವೇಶನ ಗುರುತಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ರಘು ಲಕ್ಕಣ್ಣವರ,ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ,ತಹಸೀಲ್ದಾರ ಆರ್.ವಿ.ಕಟ್ಟಿ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ರಂಗಣ್ಣವರ್,ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಮುಖಂಡರಾದ ಬಿ.ವೈ.ಲಿಂಗದಾಳ,ಸುಜಾತಾರಡ್ಡಿ,ಭಾಗೀರಥಿಬಾಯಿ ಮುದರಡ್ಡಿ,ರಮೇಶ ನಾಯಕ,ಡಾ.ವಿ.ಎಸ್.ದೊಡ್ಡಮನಿ .ಸಂತೋಷ ದೇವರಡ್ಡಿ ಮತ್ತಿತರರು ಸಭೆಯಲ್ಲಿದ್ದರು.

loading...