loading...

ಶ್ರೀನಗರ: ಉಗ್ರರ ದಾಳಿ ಹಾಗೂ ಕಲ್ಲು ತೂರಾಟದಿಂದಾಗಿ ದಿನದಿಂದ ದಿನಕ್ಕೆ ತತ್ತರಿಸುತ್ತಿರುವ ಕಾಶ್ಮೀರಕ್ಕೆ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು ಬುಧವಾರ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕಿಸಿದ್ದಾರೆ.
ನಿನ್ನೆಯಷ್ಟೇ ಕಾಶ್ಮೀರಕ್ಕೆ ಭೇಟಿ ನೀಡಿದ ಜೇಟ್ಲಿವಯವರು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕಾಶ್ಮೀರದಲ್ಲಿ ಪ್ರಸ್ತುತ ಇರುವ ಪರಿಸ್ಥಿತಿ ಕುರಿತಂತೆ ವರದಿ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಸಭೆಯಲ್ಲಿ ನೂತನವಾಗಿ ನೇಮಕಗೊಂಡಿರುವ ರಕ್ಷಣಾ ಕಾರ್ಯದರ್ಶಿ ಸಂಜಯ್ ಮಿತ್ರಾ ಹಾಗೂ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.
ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಸಂಸ್ಥೆಗಳೊಂದಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡುತ್ತಿದ್ದು, ಪ್ರಸ್ತುತ ಕಾಶ್ಮೀರದಲ್ಲಿನ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ ಎಂದು ಅಧಿಕಾರಿಗಳು ಜೇಟ್ಲಿಯವರಿಗೆ ತಿಳಿಸಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಪಾಕಿಸ್ತಾನ ನಡೆಸುತ್ತಿರುವ ಅಪ್ರಚೋದಿತ ಗುಂಡು ಹಾಗೂ ಶೆಲ್ ಗಳ ದಾಳಿ ಕುರಿತಂತೆಯೂ ಅಧಿಕಾರಿಗಳು ವರದಿ ಸಲ್ಲಿಸಿದ್ದು, ಈ ವೇಳೆ ಜೇಟ್ಲಿಯವರು ಯೋಧರ ತ್ಯಾಗ ಹಾಗೂ ಬಲಿದಾನದ ಕುರಿತಂತೆ ಕೊಂಡಾಡಿದ್ದಾರೆಂದು ತಿಳಿದುಬಂದಿದೆ.
ಸೇನೆ ಕುರಿತಂತೆ ಇಡೀ ದೇಶ ಹೆಮ್ಮೆ ಪಡುತ್ತಿದೆ. ದೇಶದ ಸಮಗ್ರತೆಗಾಗಿ ಸವಾಲಿನ ಪರಿಸ್ಥಿತಿಗೆಳನ್ನು ಯೋಧರು ಎದುರಿಸುತ್ತಿದ್ದು, ಅವರ ತ್ಯಾಗ ಹಾಗೂ ಬಲಿದಾನಕ್ಕೆ ಸೆಲ್ಯೂಟ್ ಹೊಡೆದಿದ್ದಾರೆ.
ಯೋಧರು ತಮ್ಮ ಕರ್ತವ್ಯವನ್ನು ಇದೇ ರೀತಿಯಲ್ಲಿ ಮುಂದುವರೆಸಬೇಕು ಎಂದಿದ್ದಾರೆ.

loading...