loading...

ಲಂಡನ್: ಮ್ಯಾಂಚೆಸ್ಟರ್ ಅರೆನಾ ಪ್ರದೇಶದಲ್ಲಿ ತಡರಾತ್ರಿ ದಾಳಿ ನಡೆದಿದೆ. ಈ ಘಟನೆಯಲ್ಲಿ 19 ಜನ ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಕಿ ಅರಿಯಾನ ಗ್ರಾಂಡೆ ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಎರಡು ಪ್ರಬಲವಾದ ಬಾಂಬ್‍ಗಳು ಸ್ಫೋಟಗಳು ಸಂಭವಿಸಿವೆ. ಕಾರ್ಯಕ್ರಮಕ್ಕೆ ಬಂದಿದ್ದ 19 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಆದರೆ, ಈ ಘಟನೆಯಲ್ಲಿ ಗಾಯಕಿ ಅರಿಯಾನ ಗ್ರಾಂಡೆ ಪ್ರಾಣಾಪಾಯದಿಂದ ಬಚಾವ್ ಆಗಿದ್ದು, ಅವರಿಗೆ ಯಾವುದೇ ರೀತಿಯ ಗಾಯಗಳು ಆಗಿಲ್ಲ ಎಂದು ತಿಳಿದುಬಂದಿದೆ.
ಈ ಸ್ಫೋಟಕ್ಕೆ ಕಾರಣವೇನು ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಇದು ಉಗ್ರರ ಕೃತ್ಯವೆಂದು ಪೊಲೀಸರು ಶಂಕಿಸಿದ್ದಾರೆ.

loading...