loading...

ಕನ್ನಡಮ್ಮ ಸುದ್ದಿ-ಧಾರವಾಡ : ಮೈಸೂರು ಮಹಾನಗರ ಪಾಲಿಕೆ ಹಾಗೂ ಕಲಬುರ್ಗಿ ಮಹಾನಗರ ಪಾಲಿಕೆ ನೀರು ಸರಬರಾಜು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಸರಕಾರ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಉದ್ಯೊಗ ಭದ್ರತೆ ನೀಡಿದೆ. ಅದೇ ಮಾದರಿಯಂತೆ ಹು-ಧಾ ಮಹಾನಗರ ಪಾಲಿಕೆಯ ಗುತ್ತಿಗೆ ಕಾರ್ಮಿಕರಿಗೂ ಸಮಾನ ಕೇಲಸಕ್ಕೆ ಸಮಾನ ವೇತನ ಹಾಗೂ ಉದ್ಯೊಗ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಗುತ್ತಿಗೆ ನೌಕರದಾರರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಇರುವ ಎಲ್ಲ ಪಾಲಿಕೆಗಳ ಪೌರ ಕಾರ್ಮಿಕರಿಗೆ ಒಂದೇ ನೀತಿಯನ್ನು ಅನುಸರಿಸಬೇಕಿದ್ದ ಸರಕಾರ, ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಹಚ್ಚುತ್ತಿದೆ. 24/7 ಕುಡಿಯುವ ನೀರು ಸರಬರಾಜು ಯೋಜನೆಯಡಿ 1163 ಕೋಟಿ ರು ಅನುದಾನ ಬಿಡುಗಡೆಯಾಗಿದ್ದು ಅದರಲ್ಲಿ ಭ್ರಷ್ಠಾಚಾರ ನಡೆಸುವ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿ ಗುತ್ತಿಗೆ ನೌಕರರಿಗೆ ಅನ್ಯಾಯ ಮಾಡುತ್ತಿದ್ದಾರೆ. 20 ವರ್ಷಗಳಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ 483 ಗುತ್ತಿಗೆ ನೌಕರರನ್ನು ತೆಗೆದುಹಾಕುವ ಹುನ್ನಾರ ನಡೆಸುತ್ತಿದೆ. ಆದರೆ ಈ ಕುರಿತು ಯಾವುದೇ ಪಕ್ಷದ ರಾಜಕೀಯ ಮುಖಂಡರು ಸರಕಾರದ ಗಮನ ಸೆಳೆಯದೆ ಇರುವುದು ದುರಂತ ಎಂದರು.
ರಾಜ್ಯ ಸರಕಾರದ ಮಟ್ಟದಲ್ಲಿ ಚರ್ಚೆಯಾಗಿ ಅನುಮೋದನೆಯ ಹಂತದಲ್ಲಿರುವ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವ ಕಡತವನ್ನು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ಕೂಡಲೇ ವಿಲೇವಾರಿ ಮಾಡಬೇಕು. ಸತತ ಏಳು ದಿನಗಳಿಂದ ನಿರತರ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದರೂ ಸ್ಥಳೀಯ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ಕಾರ್ಮಿಕ ಸಚಿವ ಸಂತೋಷ ಲಾಡ ಹಾಗೂ ಸಂಸದ ಮತ್ತು ಶಾಸಕರು ಬೇಟಿ ನಿಡದೇ ಇರುವುದು ನೊವು ತಂದಿದೆ. ಒಂದು ವೇಳೆ ಈ ವಿಷಯದಲ್ಲಿ ಸರಕಾರ ನಿರ್ಲಕ್ಷ್ಯತೆ ತೊರಿದಲ್ಲಿ ಮುಂದಿನ ದಿನಗಳಲ್ಲಿ ಆಮರಣಾಂತರ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

loading...