loading...

ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು ಮಂಗಳವಾರ ಫಲಿತಾಂಶ ಪ್ರಕಟಗೊಳಿಸಿದ್ದಾರೆ.
ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಪ್ರತೀಕ್ ನಾಯಕ್ ಟಾಪರ್ ಆಗಿದ್ದು, ವಿವಿಎಸ್ ಸರ್ದಾರ್ ಪಟೇಲ್ ಕಾಲೇಜು ವಿದ್ಯಾರ್ಥಿ ಸುಮಂತ್ ಹೆಗ್ಡೆ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಅಂತೆಯೇ ಬೆಂಗಳೂರಿವ ಆರ್ ವಿ ಪಿಯು ಕಾಲೇಜಿನ ವಿದ್ಯಾರ್ಥಿ ಅನಿರುದ್ಧ್ ಇಂಜಿನಿಯರಿಂಗ್ ವಿಭಾಗದಲ್ಲಿ 3ನೇ ರ್ಯಾಂಕ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಸಂಪೂರ್ಣ ಫಲಿತಾಂಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಅಧಿಕೃತ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು ಫಲಿತಾಂಶ ಪ್ರಕಟಸಿದ್ದು, ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಉಪಸ್ಥಿತರಿದ್ದರು.

loading...