ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90 ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

0
44
loading...

ಕನ್ನಡಮ್ಮ ಸುದ್ದಿ
ಬೆಳಗಾವಿ : ಬರುವ ಬುಧವಾರ 14ರಂದು ಸುವರ್ಣ ವಿಧಾನ ಸೌಧದ ಸೇಂಟ್ರಲ್ ಹಾಲ್‍ನಲ್ಲಿ 2016-17 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ವಿವಿಧ ಸರಕಾರಿ ವಸತಿ ನಿಲಯಗಳಲ್ಲಿದ್ದು ಶೇ. 90 ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಜಯರಾಮ್ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಸುಮಾರು 600 ವಿದ್ಯಾರ್ಥಿಗಳಿಗೆ ತಲಾ 10 ಸಾವಿರದಂತೆ ಪ್ರೋತ್ಸಾಹ ಧನವನ್ನು ನೀಡಲಾಗುವುದು ಅದರ ಜೊತೆಗೆ ಯುಪಿಎಸ್‍ಸಿ ಹಾಗೂ ಕೆಪಿಎಸ್‍ಸಿ ಸ್ಪಧಾತ್ಮಕ ಪರೀಕ್ಷೆಯಲ್ಲಿ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಜಿಲ್ಲೆಯ 46 ಜನ ಅಭ್ಯರ್ಥಿಗಳ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಕಾರ್ಯಕ್ರಮಕ್ಕೆ ಯುಪಿಎಸ್‍ಸಿ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಗಳಿಸಿದ ಕೋಲಾರದ ನಂದಿನಿ ಅವರಿಗೆ ಆಹ್ವಾನ ನೀಡಲಾಗಿದೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದಾರೆಂದು ಜಿಲ್ಲಾಧಿಕಾರಿ ಜಯರಾಮ್ ತಿಳಿಸಿದರು.
ಜಿಪಂ ಸಿಇಓ ರಾಮಚಂದ್ರನ್.ಆರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

loading...