ಕಿರಣ್ ಸುಬ್ಬರಾವ್‍ಗೆ ವಿಶ್ವೇಶ್ವರಯ್ಯ ಪ್ರಶಸ್ತಿ

0
34
loading...


ಕನ್ನಡಮ್ಮ ಸುದ್ದಿ
ಬೆಳಗಾವಿ:15 ಬೆಂಗಳೂರಿನ ಇಂಟರ್ ನ್ಯಾಶನಲ್ ಇನ್‍ಸ್ಟಿಟ್ಯೂಟ್ ಫಾರ್ ಸೋಶಿಯಲ್ ಆ್ಯಂಡ್ ಇಕಾನಾಮಿಕ್ ರಿಫಾಮ್ರ್ಸ್ ನೀಡುವ ಸರ್ ಎಂ.ವಿಶ್ವೇಶ್ವರಯ್ಯ ರಾಷ್ಟ್ರೀಯ ಪ್ರಶಸ್ತಿಗೆ ಬೆಳಗಾವಿಯ ಸ್ಮಾರ್ಟ್‍ಸಿಟಿ ಎಂಜಿನಿಯರ್ ಕಿರಣ ಸುಬ್ಬರಾವ್ ಆಯ್ಕೆಯಾಗಿದ್ದಾರೆ.
ಇದೇ 24ರಂದು ಬೆಂಗಳೂರಿನ ಎಡಿಎ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಕೇಂದ್ರ ಸಚಿವ ಸದಾನಂದ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದುಘಿ, ಖ್ಯಾತ ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾ`Àರಣ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಗಯಲ್ಲಿ ಎಂಜಿನಿಯರ್ ಆಗಿ ಕಳೆದ 27 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಿರಣ್ ಸುಬ್ಬರಾವ್, ಸಧ್ಯ ಸ್ಮಾರ್ಟ್‍ಸಿಟಿ ಸ್ಪೆಷಲ್ ಪರ್ಪಸ್ ವೆಹಿಕಲ್‍ನಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

loading...