ಚಿಕ್ಕೋಡಿ-ಸದಲಗಾ ಮತಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ: ಅಣ್ಣಾಸಾಹೇಬ ಜೊಲ್ಲೆ

0
345
loading...

 

ಕನ್ನಡಮ್ಮ ಸುದ್ದಿ

ಚಿಕ್ಕೋಡಿ 18: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ  ಭಾರತೀಯ ಜನತಾ ಪಕ್ಷ ಅಧಿಕಾರಕ್ಕೇರುವುದು ಶತಸಿದ್ಧ ಎಂದು ಜೊಲ್ಲೆ ಉದ್ಯೋಗ ಸಮೂಹದ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ತಾಲೂಕಿನ ಯಡೂರ ಗ್ರಾಮದಲ್ಲಿ ಜೊಲ್ಲೆ ಉದ್ಯೋಗ ಸಮೂಹದಿಂದ ಕಣ್ಣು ತಪಾಸಣಾ ಶಿಬಿರದಲ್ಲಿ ತಪಾಸಣೆ ಬಳಿಕ ಉಚಿತ ಕನ್ನಡಕ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಜೊಲ್ಲೆ ಉದ್ಯೋಗ ಸಮೂಹದಿಂದ ಅನೇಕ ಸೌಲಭ್ಯಗಳನ್ನು ಒದಸಲಾಗಿದ್ದು, ಮುಂಬರುವ ಚುನಾವಣೆಯಲ್ಲಿ ಚಿಕ್ಕೋಡಿ ಸದಲಗಾ ಮತಕ್ಷೇತ್ರದಿಂದ ಪಕ್ಷ ಟಿಕೇಟ್ ನೀಡಿದರೆ ಸ್ಪರ್ಧೆಗಿಳಿಯುವುದು ಖಚಿತ ಎಂದರು.

loading...