ಪ್ರಬಲ ಅಭ್ಯರ್ಥಿ ಸ್ಪರ್ಧಿಸಿದರೆ ನಾನೇ ಕಣಕ್ಕೆ: ಸಂಸದ ಪ್ರಕಾಶ ಹುಕ್ಕೇರಿ

0
268
loading...

ಕನ್ನಡಮ್ಮ ಸುದ್ದಿ
ಚಿಕ್ಕೋಡಿ ೧೧: ಚಿಕ್ಕೋಡಿ-ಸದಲಗಾ ವಿಧಾನಸಭಾ‌ ಮತಕ್ಷೇತ್ರದಿಂದ ಪ್ರಬಲ ಅಭ್ಯರ್ಥಿ ಸ್ಪರ್ಧಿಸಿದರೆ ನಾನೇ ಕಣಕ್ಕಿಳಿಯುವದಾಗಿ ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ‌ಹೇಳಿದರು.
ತಾಲೂಕಿನ ಕಾಡಾಪೂರ ಗ್ರಾಮದಲ್ಲಿ ೫೦ ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಿರುವ ವಾತಾವರಣ ನೋಡಿದರೆ ಯಾರೂ ಪ್ರಬಲ ಪೈಪೋಟಿಗಾರರಿಲ್ಲ. ಒಂದು ವೇಳೆ ಎದುರಾಳಿಯಾಗಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿದರೆ ನಾನೇ ಸ್ಪರ್ಧಿಸುತ್ತೇನೆ ಇಲ್ಲವಾದರೆ ನಾನು ಬೇರೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಆಕಾಂಕ್ಷೆ ಇಟ್ಟುಕೊಂಡಿದ್ದೇನೆ. ನನ್ನ ಪುತ್ರ ಗಣೇಶ ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದರು.
ಈ ಸಂದರ್ಭದಲ್ಲಿ ಕಾಡಾಪೂರ ಸೇರಿದಂತೆ ವಿವಿಧ ಗ್ರಾಮಗಳ ಪ್ರಮುಖರು ಪಾಲ್ಗೊಂಡಿದ್ದರು.

loading...