ಬೆಳಗಾವಿಗೆ ಬಂಪರ್ ಕೊಡುಗೆ ನೀಡಲಿರುವ ಕೇಂದ್ರ ಸಚಿವ ರಾಧೋಡ್

0
515
loading...


ಕನ್ನಡಮ್ಮ ಸುದ್ದಿ
ಬೆಳಗಾವಿ:12 ಉತ್ತರ ಕರ್ನಾಟಕದ ಗಡಿ ಜಿಲ್ಲೆಯ ಬೆಳಗಾವಿಗೆ ಆಗಮಿಸಿರುವ ಕೇಂದ್ರ ಸರಕಾರದ ಮಾಹಿತಿ ಮತ್ತು ಪ್ರಸಾರ ರಾಜ್ಯ ಖಾತೆ ಸಚಿವ ರಾಜವರ್ಧನ ಸಿಂಗ್ ರಾಥೋಡ್ ಅವರು ಬೆಳಗಾವಿ ಜಿಲ್ಲೆಗೆ ಆಲ್ ಇಂಡಿಯಾ ರೇಡಿಯೋ ಕಚೇರಿ ಘೋಷಣೆ ಮಾಡಲಿದ್ದಾರೆ.
ಈಗಾಗಲೇ ಬೆಳಗಾವಿ ನಗರದ ಮನೆಮನೆಯಲ್ಲಿ ಉತ್ತಮವಾಗಿ ಮೂಡಿ ಬರುತ್ತಿರುವ ಕೆಎಲ್‍ಇ ವೇಣು ಧ್ವನಿ 90.4 ಬಾನುಲಿ ಕೇಂದ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ ಜಿಲ್ಲೆಗೆ ಆಗಮಿಸಿರುವ ಕೇಂದ್ರ ಸರಕಾರದ ಮಾಹಿತಿ ಮತ್ತು ಪ್ರಸಾರ ರಾಜ್ಯ ಖಾತೆ ಸಚಿವ ರಾಜವರ್ಧನ ಸಿಂಗ್ ಆಲ್ ಇಂಡಿಯಾ ರೇಡಿಯೋ ಕಚೇರಿಯನ್ನು ನಿರ್ಮಾಣ ಮಾಡಲು ಮಂಗಳವಾರ ಬೆಳಗಾವಿಯಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.
ಬೆಳಗಾವಿಯಲ್ಲಿ ಆಲ್ ಇಂಡಿಯಾ ರೇಡಿಯೋ ಕೇಂದ್ರ ಕಚೇರಿ ಪ್ರಾರಂಭವಾದರೇ ಎಷ್ಟೋ ಜನರಿಗೆ ಉದ್ಯೋಗ ಕಲ್ಪಿಸಿಕೊಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸಚಿವ ರಾಜವರ್ಧನ ಬೆಳಗಾವಿಯಲ್ಲಿ ಆಲ್ ಇಂಡಿಯಾ ಕಚೇರಿ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

loading...