ಅಧ್ಯಕ್ಷ,ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

0
35
loading...

ಘಟಪ್ರಭಾ: ಧುಪದಾಳ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಸೋಮವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸತ್ತೇಪ್ಪಾ ಈರಪ್ಪಾ ಬೆನವಾಡಿ ಹಾಗೂ ಉಪಾಧ್ಯಕ್ಷರಾಗಿ ಮಲಪೂರಿ ಲಗಮಣ್ಣಾ ಗಾಡಿವಡ್ಡರ ಅವಿರೋಧವಾಗಿ ಆಯ್ಕೆಯಾದರು.
ಕಳೆದ ಕೆಲ ದಿನಗಳ ಹಿಂದೆ ಅಧ್ಯಕ್ಷ ಕಲ್ಲಪ್ಪಾ ಸನದಿ ಹಾಗೂ ಉಪಾಧ್ಯಕ್ಷೆ ಕಮಲಾ ಕೌಜಲಗಿ ಅವರು ರಾಜೀನಾಮೆ ನೀಡಿದ್ದರ ಹಿನ್ನೆಲೆಯಲ್ಲಿ ತೆರುವಾದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಈ ಅವಿರೋಧ ಆಯ್ಕೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಸತ್ತೇಪ್ಪಾ ಬೆನವಾಡಿ ಉಪಾಧ್ಯಕ್ಷರ ಸ್ಥಾನಕ್ಕೆ ಮಲಪೂರಿ ಗಾಡಿವಡ್ಡರ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಅಧಿಕಾರಿಯಾದ ಭೂಸೇನಾ ನಿಗಮದ ಅಧಿಕಾರಿ ಝಡ್.ಎಮ್. ಚಿಂಚೂಳ್ಳಕರ ಅವರು ಅವಿರೋಧ ಆಯ್ಕೆಯಾಗಿದೆ ಎಂದು ಘೋಷಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಟಿ.ಆರ್.ಕಾಗಲ್, ಕಾಂತು ಯತ್ತಿನಮನಿ, ತಾ.ಪಂ ಸದಸ್ಯ ಲಗಮಣ್ಣಾ ನಾಗನ್ನವರ, ಮುಖಂಡರಾದ ಡಿ.ಎಂ.ದಳವಾಯಿ. ಸೇರಿದಂತೆ ಸರ್ವ ಸದಸ್ಯರು ಇದ್ದರು.

loading...