ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ

0
32
loading...

ಗೋಕಾಕ: ಬಡ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ರಾಮಯ್ಯ ಅವರ ನೇತೃತ್ವದ ಕಾಂಗ್ರೆsಸ್ ಸರಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದು ಗ್ರಾಮಾಂತರ ಪ್ರದೇಶದಲ್ಲಿ ವಸತಿ ಶಾಲೆಗಳನ್ನು ಪ್ರಾರಂಭಿಸಿ ಅನುಕೂಲ ಮಾಡಿಕೊಡುತ್ತಿದೆ ಎಂದು ಸಣ್ಣ ಕೈಗಾರಿಕೆ ಹಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಅವರು ಶುಕ್ರವಾರದಂದು ನಗರದ ವಿವೇಕಾನಂದ ನಗರದಲ್ಲಿಯ ಸರಕಾರಿ ಉರ್ದು ಶಾಲೆಯಲ್ಲಿ ಗೊಡಚಿನಮಲ್ಕಿ ಗ್ರಾಮಕ್ಕೆ ಮಂಜೂರಾದ ಡಾ. ಬಿ.ಆರ್.ಅಂಬೇಡಕರ ವಸತಿ ಶಾಲೆ ತಾತ್ಕಾಲಿಕವಾಗಿ ನಗರದಲ್ಲಿ ಚಾಲನೆ ನೀಡಿ ಮಾತನಾಡುತ್ತಿದ್ದರು.
ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಆಸ್ತಿಯನ್ನಾಗಿ ಮಾಡಬೇಕೆಂದು ಹೇಳಿದ ಅವರು ಸರಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸೌಲಭ್ಯ ಒದಗಿಸಿದ್ದು ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸುಸಂಸ್ಕøತ ಸಮಾಜ ನಿರ್ಮಾಣ ಮಾಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ಟಿ.ಆರ್.ಕಾಗಲ್ ಹಾಗೂ ಮಡ್ಡೆಪ್ಪ ತೋಳಿನವರ, ತಾ.ಪಂ. ಅಧ್ಯಕ್ಷೆ ಶ್ರೀಮತಿ ಸುನಂದಾ ಕರದೇಸಾಯಿ, ಉಪಾಧ್ಯಕ್ಷ ಯಲ್ಲಪ್ಪ ನಾಯಿಕ, ನಗರಾಧ್ಯಕ್ಷ ತಳದಪ್ಪ ಅಮ್ಮಣಗಿ, ಉಪಾಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜತ್ತಿ, ಕುಂದರಗಿ ಗ್ರಾ.ಪಂ. ಅಧ್ಯಕ್ಷ ಪರುಶರಾಮ ಗೋಡಿಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನ್ನನವರ, ಸಮಾಜ ಕಲ್ಯಾಣ ಅಧಿಕಾರಿ ಎಸ್.ವಿ.ಕಲ್ಲಪ್ಪನವರ, ಜಿಲ್ಲಾ ಸಮನ್ವಯ ಅಧಿಕಾರಿ ಆರ್.ವೈ.ಗಂಗರಡ್ಡಿ ಸೇರಿದಂತೆ ಕುಂದರಗಿ, ಗೊಡಚಿನಮಲ್ಕಿ ಗ್ರಾಮಸ್ಥರು ಇದ್ದರು.

loading...