ಮೂವರು ಹಿಜ್ಬುಲ್ ಉಗ್ರರನ್ನು ಹೊಡೆದುರುಳಿಸಿದ ಸೇನೆ

0
19
loading...

ಬದ್ಗಾಮ್: ಕಾಶ್ಮೀರದ ಬದ್ಗಾಮ್ ನಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಸೇನಾ ಪಡೆ ಹೊಡೆದುರುಳಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ.
ಕಳೆದ ರಾತ್ರಿ ರಕ್ಷಣಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಬಲಿಯಾಗಿದ್ದಾರೆ.
ರಾಷ್ಟ್ರೀಯ ರೈಫಲ್ಸ್ ದಳದ ವಿಶೇಷ ಕಾರ್ಯಾಚರಣೆ ತಂಡ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಸಶಸ್ತ್ರ ಮೀಸಲು ಪಡೆ ಮಂಗಳವಾರ ಸಂಜೆ ಬುದ್ಗಾಮ್‍ನ ರಡ್ ಬಗ್ ಗ್ರಾಮದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಇನ್ನೂ ಸತ್ತ ಉಗ್ರರ ಬಳಿಯಿಂದ ಶಸ್ತ್ರಾಸ್ತ್ರಗಳು ಮತ್ತು ಯುದ್ದ ಸಾಮಾಗ್ರಿಗಳನ್ನ ವಶ ಪಡಿಸಿಕೊಂಡಿದ್ದಾರೆ.

loading...