ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಅಗಷ್ಟ 22ರಂದು ರ್ಯಾಲಿ

0
142
loading...

ಕನ್ನಡಮ್ಮ ಸುದ್ದಿ
ಬೆಳಗಾವಿ ; ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿ ಆಗಷ್ಟ 22 ರಂದು ಲಿಂಗಾಯತ ಧರ್ಮ ಸಮನ್ವಯ ಸಮಿತಿ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಲಿಂಗಾಯತ ಮಹಾರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಸಿದ್ದರಾಮ ಮಹಾಸ್ವಾಮಿಗಳು ತಿಸಿಳಿದರು.
ಅವರು ಗುರುವಾರದಂದು ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, 12 ನೇ ಶತಮಾನದಲ್ಲಿ ಬಸವಣ್ಣನವರಿಂದ ಸ್ಥಾಪಿಸಲ್ಪಟ್ಟಿರುವ ಲಿಂಗಾಯತ ಧರ್ಮವು ಸಂವಿಧಾನದ ಮಾನ್ಯತೆ ಪಡೆಯುವ ಎಲ್ಲ ಅರ್ಹತೆ ಹೊಂದಿದೆ. ಲಿಂಗಾಯತಕ್ಕೆ ಸಂವಿಧಾನದ ಮಾನ್ಯತೆ ಸಿಗಲೇಬೇಕು ಎಂದು ಆಗ್ರಹಿಸಿದರು.
ಲಿಂಗಾಯತ ಧರ್ಮ ಎಂದರೇ ಕೇವಲ ಲಿಂಗಾಯತರಲ್ಲ. 72 ಪಂಗಡ ಉಪ ಪಂಗಡಗಳಿವೆ. ಅವರೆಲ್ಲರು ಬಸವಣ್ಣನವರನ್ನು ಧರ್ಮಗುರು ಎಂದು ಒಪಿಕೊಂಡಿದ್ದಾರೆ. ಲಿಂಗಾಐತಕ್ಕೆ ಧರ್ಮದ ಮಾನ್ಯತೆ ಸಿಕ್ಕರೆ ಸಮಾಜ ಒಡೆಯುವದಿಲ್ಲ. ತಾತ್ವಿಕವಾಗಿ ಇನ್ನಷ್ಟು ಗಟ್ಟಿಯಾಗುತ್ತದೆ. 22 ರ ರ್ಯಾಲಿಯಲ್ಲಿ 3 ಲಕ್ಕಕ್ಕಿಂತ ಅಧಿಕ ಸಂಖ್ಯೆಯಲ್ಲಿ ಜನ ಭಾಗವಹಿಸಲಿದ್ದಾರೆ ಎಂದರು.
ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ, ಚನ್ನಬಸವಾನಂದ ಸ್ವಾಮೀಜಿ ಸೇರಿದಂತೆ ಬಸವ ಪರಂಪರೆಯ ಅನೇಕ ಮಠಾಧೀಶರು ಮತ್ತು ಸಮನ್ವಯ ಸಮಿತಿಯ ಹಾಗೂ ವಿವಿಧ ಲಿಂಗಾಯತ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

loading...