ಅಂಗನವಾಡಿಯ 1.50 ಲಕ್ಷ ಮೌಲ್ಯದ ಆಹಾರ ಪದಾರ್ಥ ವಶ

0
28
loading...

ಕನ್ನಡಮ್ಮ ಸುದ್ದಿ-ಬೆಳಗಾವಿ : ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ವಿತರಿಸಲಾಗುತ್ತಿದ್ದ ಪೌಷ್ಠಿಕ ಆಹಾರ ಮನೆಯಲ್ಲಿಟ್ಟು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಸುಮಾರು ರೂ. 1.50 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ರಾಮತೀರ್ಥ ನಗರದಲ್ಲಿ ನಡೆದಿದೆ.
ರಾಮತೀರ್ಥ ನಗರದ ಸರೋಜಾ ದೊಡಮನಿ ಮಾರಾಟ ಮಾಡುತ್ತಿದ್ದ ಮಹಿಳೆ. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ವಿತರಿಸಲಾಗುತ್ತಿರುವ ಪೌಷ್ಠಿಕಾಂಶಯುಕ್ತ ದಸವ ಧಾನ್ಯ ಹಾಗೂ ಹಾಲಿನ ಪುಡಿ ಪ್ಯಾಕೇಟ್, ಹೆಸರು ಕಾಳು ಸೇರಿದಂತೆ ಇತರ ಪೌಷ್ಠಿಕಾಂಶ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಈ ದಾಳಿ ವೇಳೆ ಮಾರಾಟ ಮಾಡುತ್ತಿದ್ದ ಮಹಿಳೆ ಪರಾರಿಯಾಗಿದ್ದು, ಶೋಧಕಾರ್ಯ ಮುಂದುವರೆಸಿದ್ದಾರೆ.
ಈ ಕುರಿತು ಮಾಳಮಾರಿತು ಪೆÇಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

loading...