ಗೋರಖ್‍ಪುರ್ ದುರಂತ: ಹೆಚ್ಚುತ್ತಲಿರುವ ಮಕ್ಕಳ ಸಾವಿನ ಸಂಖ್ಯೆ

0
19
loading...

ಗೋರಖ್‍ಪುರ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸ್ವಕ್ಷೇತ್ರ ಗೋರಖ್‍ಪುರ್ದಲ್ಲಿರುವ ಹಾಗೂ ಸರ್ಕಾರಿ ಸ್ವಾಮ್ಯದ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ 70ಕ್ಕೇರಿದೆ. ಮಕ್ಕಳ ಸಾವು ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ಗಂಭೀರವಾಗಿ ಪರಿಗಣಿಸಿದ್ದು, ಪರಿಸ್ಥಿತಿ ಬಗ್ಗೆ ತೀವ್ರ ನಿಗಾ ವಹಿಸಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಜೆ.ಪಿ.ನಡ್ಡಾ ಅವರು ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಆ.7 ರಿಂದ 11ರವರೆಗೆ ಐದು ದಿನಗಳ ಅವಧಿಯಲ್ಲಿ ಬಿಆರ್ಡಿ ಆಸ್ಪತ್ರೆಯಲ್ಲಿ 63 ಮಕ್ಕಳು ಬಲಿಯಾಗಿದ್ದರು. ಮೊನ್ನೆ, ನಿನ್ನೆ ಮತ್ತು ಇಂದು ಇನ್ನೂ ಕೆಲವು ಮಕ್ಕಳು ಅಸುನೀಗಿದ್ದು, ಸತ್ತವರ ಸಂಖ್ಯೆ 70ಕ್ಕೇರಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಈವರೆಗೆ 65 ಮಕ್ಕಳು ಮೃತಪಟ್ಟಿದ್ದಾರೆ ಎಂಬುವುದನ್ನು ದೃಢಪಡಿಸಿದ್ದಾರೆ. ಈ ಸಾವು ಪ್ರಕರಣಗಳನ್ನು ಗಂಭೀರವಾಗಿ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮಕ್ಕಳ ರಕ್ಷಣೆಗೆ ತ್ವರಿತ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮತ್ತು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಈ ಘಟನೆಗಳಿಗೆ ಸಂಬಂಧಪಟ್ಟಂತೆ ತಪ್ಪಿತಸ್ಥರ ವಿರುದ್ಧ ಈಗಾಗಲೇ ಸೂಕ್ರ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು
ಆಮ್ಲಜನಕ ಪೂರೈಕೆ ಅಡಚಣೆಯಿಂದಾಗಿ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ಮತ್ತು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಪರಿಸ್ಥಿತಿ ನಿರ್ವಹಣೆಯ ಉಸ್ತುವಾರಿ ವಹಿಸಿದ್ದಾರೆ. ಮಕ್ಕಳ ಸಾವು ಪ್ರಕರಣದ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆದೇಶ ನೀಡಿದ್ದಾರೆ.

loading...