ಡೊಕ್ಲಾಂ ಬಿಕ್ಕಟ್ಟು: ತಾರ್ಕಿಕ ಅಂತ್ಯ

0
50
loading...

ನವದೆಹಲಿ: ಕಳೆದ ಎರಡು ತಿಂಗಳಿಗೂ ಅಧಿಕ ಕಾಲ ಭಾರತ ಮತ್ತು ಚೀನಾ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿದ್ದ ಸಿಕ್ಕಿಂ ನ ಡೋಕ್ಲಾಂ ಗಡಿ ವಿವಾದಕ್ಕೆ ಸೋಮವಾರ ತಾರ್ಕಿಕ ಅಂತ್ಯ ಕಂಡಿದ್ದು, ಉಭಯ ಸೇನಾಪಡೆಗಳು ವಿವಾದಿತ ಪ್ರದೇಶದಿಂದ ಹಿಂದಕ್ಕೆ ಸರಿಯಲು ಒಪ್ಪಿಗೆ ಸೂಚಿಸಿವೆ ಎಂದು ತಿಳಿದುಬಂದಿದೆ.
ಭಾರತ ಮತ್ತು ಚೀನಾ ರಾಯಭಾರಿ ಕಚೇರಿಗಳ ಮಟ್ಟದ ಸಂಧಾನ ಮಾತುಕತೆ ಕೊನೆಗೂ ಯಶಸ್ವಿಯಾಗಿದೆ. ಹೀಗಾಗಿ ವಿವಾದಿತ ಸಿಕ್ಕಿಂನ ಡೋಕ್ಲಾಂ ನಲ್ಲಿ ಬೀಡುಬಿಟ್ಟಿದ್ದ ಉಭಯ ದೇಶಗಳ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳಲು ಉಭಯ ದೇಶಗಳು ಒಪ್ಪಿಗೆ ನೀಡಿವೆ. ಈ ಬಗ್ಗೆ ಸ್ವತಃ ಭಾರತದ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಅವರು ಟ್ವೀಟ್ ಮಾಡಿದ್ದು, ಗಡಿಯಲ್ಲಿ ನಿರ್ಮಾಣವಾಗಿರುವ ಪ್ರಕ್ಷುಬ್ಧ ವಾತಾವರಣ ಶಮನಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಆ ಮೂಲಕ ಸುಧೀರ್ಘ 2 ತಿಂಗಳಿಗೂ ಅಧಿಕ ಕಾಲ ನಡೆದ ಭಾರತ-ಚೀನೀ ಸೈನಿಕರ ಸಂಘರ್ಷಕ್ಕೆ ಉಭಯ ದೇಶಗಳ ಸರ್ಕಾರಗಳು ತಾರ್ಕಿಕ ಅಂತ್ಯ ಕಂಡಿದೆ.

loading...