ತ್ರಿವಳಿ ತಲಾಖ್ ಅಸಾಂವಿಧಾನಿ: ಸುಪ್ರೀಂ ತೀರ್ಪು

0
58
loading...

ಇತಿಹಾಸ ಸೇರಿದ ತ್ರಿವಳಿ ತಲಾಖ್
ನವದೆಹಲಿ: ದೇಶಾದ್ಯಂತ ಕುತೂಹಲ ಕೆರಳಿಸಿದ್ದ ತ್ರಿವಳಿ ತಲಾಕ್ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಸ್ಲಿಂ ವೈಯುಕ್ತಿಕ ಕಾನೂನಿಗೆ ಮಾನ್ಯತೆ ಇಲ್ಲ. ಇಂದಿನಿಂದ ದೆಶದಲ್ಲಿ ತ್ರಿವಳಿ ತಲಾಖ್ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿ ಮಹಿಳೆಯರ ಹಕ್ಕನ್ನು ಎತ್ತಿಹಿಡಿದಿದೆ.
ಸಾಂವಿಧಾನಿಕ ಪೀಠದ ಪಂಚ ಸದಸ್ಯರ ಪೈಕಿ ಇಬ್ಬರು ಸದಸ್ಯರು ತ್ರಿವಳಿ ತಲಾಖ್ ಪರ ತೀರ್ಪು ನೀಡಿದರೆ, ಉಳಿದ ಮೂವರು ನ್ಯಾಯಾಧೀಶರು ಮುಸ್ಲಿಂ ವೈಯುಕ್ತಿಕ ಕಾನೂನಿಗೆ ಸಂವಿಧಾನ ಮಾನ್ಯತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಅದರಂತೆ ಬಹುಮತದ ಆಧಾರದ ಮೇಲೆ ತ್ರಿವಳಿ ತಲ್ಲಾಖ್ ಅನ್ನು ಮುಂದಿನ 6 ತಿಂಗಳ ಕಾಲ ರದ್ದು ಮಾಡಲಾಗಿದ್ದು, 6 ತಿಂಗಳೊಳಗೆ ಈ ಬಗ್ಗೆ ಸಂಸತ್‍ನಲ್ಲಿ ಸೂಕ್ತ ಕಾನಾನು ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.
ಐವರು ನ್ಯಾಯಮೂರ್ತಿಗಳಲ್ಲಿ ಮೂವರು ನ್ಯಾಯಮೂರ್ತಿಗಳು ತ್ರಿವಳಿ ತಲಾಖ್ ವಿರುದ್ಧ ತೀರ್ಪು ಪ್ರಕಟಿಸಿದ್ದಾರೆ. ನ್ಯಾಯಮೂರ್ತಿ ಕುರಿಯನ್ ಜೋಸೆಫ್, ನ್ಯಾ. ಆರ್.ಎಫ್. ನಾರಿಮನ್ ನ್ಯಾ. ಉದಯ್ ಲಲಿತ್ ಅವರು ತ್ರಿವಳಿ ತಲಾಕ್‍ಗೆ ಕಾನೂನು ಮಾನ್ಯತೆ ಇಲ್ಲ ಎಂದು ಹೇಳಿ ಆಚರಣೆಯನ್ನು ರದ್ದು ಮಾಡಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ತ್ರಿವಳಿ ತಲಾಖ್‍ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಒಟ್ಟುಗೂಡಿಸಿ ಸತತ ಆರು ದಿನ ವಿಚಾರಣೆ ನಡೆಸಿತ್ತು. ಮೇ 18ರಂದು ವಿಚಾರಣೆ ಪೂರ್ಣಗೊಂಡಿತ್ತು. ತೀರ್ಪು ಕಾಯ್ದಿರಿಸಲಾಗಿತ್ತು.
ಈ ಐತಿಹಾಸಿಕ ತೀರ್ಪಿನಿಂದ ದೆಶದ 9 ಕೋಟಿ ಮುಸ್ಲಿಂ ಮಹಿಳೆಯರು ನಿಟ್ಟುಸಿರು ಬಿಡುವಂತಾಗಿದೆ.

loading...