ಬಿಜೆಪಿ ಕಿಸಾನ್ ಮೋರ್ಚಾ ಆಯೋಜಿಸಿದ್ದ ಸಾಂಪ್ರದಾಯಿಕ ಭಜನಾ ಸ್ಪರ್ಧೆಗೆ ಚಾಲನೆ

0
25
loading...

ಖಾನಾಪುರ: ತಾಲೂಕಿನ ಲೋಂಡಾ ಗ್ರಾಮದಲ್ಲಿ ಬುಧವಾರ ಭಾರತೀಯ ಜನತಾ ಪಕ್ಷದ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ಶತಾಬ್ದಿ ಅಂಗವಾಗಿ ಏರ್ಪಡಿಸಿದ್ದ ಸಾಂಪ್ರದಾಯಿಕ ಭಜನೆ ಸ್ಪರ್ಧೆಯನ್ನು ಕಿಸಾನ್ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ವಿಜಯಶಂಕರ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಡಾ.ವಿ.ಐ ಪಾಟೀಲ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಜಿಲ್ಲಾಧ್ಯಕ್ಷ ವಿ.ಐ ಪಾಟೀಲ, ಯಡಿಯೂರಪ್ಪ ನೇತೃತ್ವದ ಬಿಜೆಪಿ ಈಗಾಗಲೇ ಒಂದು ಅವಧಿಯ ಉತ್ತಮ ಆಡಳಿತವನ್ನು ರಾಜ್ಯಕ್ಕೆ ನೀಡಿದ್ದು, ಅವರ ಆಡಳಿತಾವಧಿಯಲ್ಲಿ ಉತ್ತರ ಕರ್ನಾಟಕದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ದೊರಕುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಿಜೆಪಿಗೆ ಬಹುಮತ ನೀಡಿದಲ್ಲಿ ಉತ್ತಮ, ಜನಪರ ಮತ್ತು ಪಾರದರ್ಶಕ ಆಡಳಿತ ನೀಡುವುದಾಗಿ ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಹಿರಿಯ ಕೀರ್ತನಕಾರರು, ಹಾಡುಗಾರರು, ವಾದ್ಯಗಾರರು, ಜನಪದ ಮತ್ತು ಭಕ್ತಿ ಗೀತೆಗಳ ಗಾಯಕರುಗಳನ್ನು ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಕಿಸಾನ್ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿಕುಮಾರ, ಉಪಾಧ್ಯಕ್ಷ ಶಂಕರಗೌಡ ಪಾಟೀಲ, ಪಕ್ಷದ ಜಿಲ್ಲಾಧ್ಯಕ್ಷ ಮುಖಂಡರಾದ ವಿಠ್ಠಲ ಹಲಗೇಕರ, ಪ್ರಹ್ಲಾದ ರೇಮಾಣಿ, ಪ್ರಮೋದ ಕೊಚೇರಿ, ರವಿ ಬನೋಶಿ, ಸಂಜಯ ಕಂಚಿ, ವೀರೇಶ ದೇವರಮನಿ, ಅಶೋಕ ನೇಸರೇಕರ, ಸುರೇಶ ದೇಸಾಯಿ ಮತ್ತಿತರರು ಇದ್ದರು.

loading...