ವಿಜ್ಞಾನಿ ಡಾ. ಭಟ್ಟ ಆರ್‍ಸಿಯುಗೆ ಭೇಟಿ

0
14
loading...

ಕನ್ನಡಮ್ಮ ಸುದ್ದಿ
ಬೆಳಗಾವಿ : ಅಮೇರಿಕಾದ ಪ್ಲೋರಿಡಾ ಅಂತರಾಷ್ಟ್ರೀಯ ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನ ಅಧ್ಯಯನ ವಿಭಾಗದಲ್ಲಿ ಪರಿಸರ ಅರ್ಥಶಾಸ್ತ್ರ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ವಿಜ್ಞಾನಿಯಾಗಿ ಸೇವೆ ಸಲ್ಲಿಸಿ, ಮಂಗಳೂರಿನ ಕಂಕನಾಡಿಯಲ್ಲಿ ಮೀನುಗಾರಿಕೆ ಕಾಲೇಜಿನಲ್ಲಿ ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ ಅಡಿಯಲ್ಲಿ ಎಮೆರಿಟಿಸ್ ಸೈಂಟಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ರಾಮಚಂದ್ರ ಭಟ್ಟ  1ನೆಯ ಸಪ್ಟಂಬರ್ 1ರಂದು ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಹಾಗೂ ಬೋಧಕ ಸಿಬ್ಬಂದಿಗಳೊಂದಿಗೆ ಉನ್ನತ ಶಿಕ್ಷಣದಲ್ಲಿನ ಸವಾಲುಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ಆರ್‍ಸಿಯುನ ಅಧಿಕಾರಿಗಳು ತಿಳಿಸಿದ್ದಾರೆ.

loading...