ಆತ್ಮಹತ್ಯೆ ರೈತರ ಸಮಸ್ಯೆಗೆ ಪರಿಹಾರವಲ್ಲ

0
32
loading...

ಗೋಕಾಕ: ರೈತರು ಜೀವನದಲ್ಲಿ ಬರುವ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಬೇಕು. ಆತ್ಮಹತ್ಯೆ ರೈತರ ಸಮಸ್ಯೆಗೆ ಪರಿಹಾರವಲ್ಲ. ಅದಕ್ಕಾಗಿ ಕಷ್ಟ ಬಂದಾಗ ತಾಳಿಕೊಂಡು ಬಾಳಿದರೆ ಜೀವನದಲ್ಲಿ ಪ್ರಗತಿ ಸಾಧ್ಯ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ತಾಲೂಕಿನ ಬೆಣಚಿನಮರಡಿ ಗ್ರಾಮದ ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಬೋರಪ್ಪ ಕಲ್ಲಪ್ಪ ಕರಿಗೌಡರ ಕುಟುಂಬಿಕರಿಗೆ ಸರಕಾರದ ಕೃಷಿ ಇಲಾಖೆಯಿಂದ ಬಂದ 5 ಲಕ್ಷ ರೂ. ಚೆಕ್‍ನ್ನು ವಿತರಿಸಿ ಮಾತನಾಡುತ್ತಿದ್ದರು. ರೈತರ ಅನುಕೂಲಕ್ಕಾಗಿ ರಾಜ್ಯ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಉಪಯೋಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ಟಿ.ಆರ್.ಕಾಗಲ್, ಮಡ್ಡೆಪ್ಪ ತೋಳಿನವರ, ಜಿ.ಪಂ. ಮಾಜಿ ಸದಸ್ಯ ನಿಂಗಪ್ಪ ಗಡಜನವರ, ಗಂಗಾಧರ ಪಾಟೀಲ, ಜಯಗೌಡ ಪಾಟೀಲ, ಕೃಷಿ ಅಧಿಕಾರಿ ಎಮ್.ಎಮ್.ನದಾಫ, ಸಹಾಯಕ ಕೃಷಿ ಅಧಿಕಾರಿ ಎನ್.ಆರ್.ಓಬಿ ಇದ್ದರು.

loading...