ಗೌರಿ ಲಂಕೇಶ್ ಹತ್ಯೆ: ತುರ್ತು ಸಭೆ ಕರೆದ ಸಿಎಂ

0
29
loading...

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.
ವಿಧಾನಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ,ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಹತ್ಯೆ ಘಟನೆ ಬಳಿಕ ಪೊಲಿಸರು ನಡೆಸಿರುವ ತನಿಖೆ, ಲಭ್ಯವಾಗಿರುವ ಮಾಹಿತಿ ಇತ್ಯಾದಿಗಳ ಕುರಿತು ಚರ್ಚೆ ನಡೆಸಲಾಗುತ್ತದೆ.

loading...