ಜೇಟ್ಲಿ ಅವರಿಗೆ ಪತ್ರ ಬರೆದ ಕುಮಾರಸ್ವಾಮಿ

0
19
loading...

ಬೆಂಗಳೂರು: ಕನ್ನಡ ಭಾಷೆಯನ್ನು ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಪರಿಗಣಿಸುವಂತೆ ಒತ್ತಾಯಿಸಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕೇಂದ್ರ ಸಚಿವ ಅರುಣ್ ಜೆಟ್ಲಿ ಅವರಿಗೆ ಪತ್ರ ಬರೆದಿದ್ದಾರೆ.
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ (ಐಬಿಪಿಎಸ್) ಹೊಸ ನಿಯಮಗಳಿಂದಾಗಿ ಗ್ರಾಮೀಣ ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ವಂಚಿತರಾಗಿರುವ ರಾಜ್ಯದ ಅಭ್ಯರ್ಥಿಗಳ ಬೆಂಬಲಕ್ಕೆ ಎಚ್.ಡಿ. ಕುಮಾರ ಸ್ವಾಮಿ ನಿಂತಿದ್ದಾರೆ.
ಇತ್ತೀಚೆಗೆ ನಡೆದ ಗ್ರಾಮೀಣ ಬ್ಯಾಂಕ್ ನೇಮಕಾತಿಗಳ ಪರೀಕ್ಷೆಯಲ್ಲಿ ಹಿಂದಿ ಅಥವಾ ಇಂಗ್ಲೀಷ್ ಭಾಷೆಯಲ್ಲಿ ಮಾತ್ರವೇ ಪರೀಕ್ಷೆ ಬರೆಯಲು ಅವಕಾಶ ಮಾಡಿರುವ ಐಬಿಪಿಎಸ್‍ನ ಹೊಸ ನಿಯಮ ಹೇಗೆ ಸಾಮಾಜಿಕವಾಗಿ ಹಿಂದುಳಿದ ಪ್ರದೇಶಗಳ ಸೂಕ್ತ ಅಭ್ಯರ್ಥಿಗಳಿಗೆ ಉದ್ಯೋಗಗಳಿಂದ ವಂಚಿತರನ್ನಾಗಿ ಮಾಡುತ್ತದೆ ಎಂಬುವುದನ್ನು ವಿವರಿಸಿದ್ದಾರೆ

loading...