ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಬೇಕು:ಕಾಟ್ಕರ್

0
29
loading...

ಕನ್ನಡಮ್ಮ ಸುದ್ದಿ
ಬೆಳಗಾವಿ : ಜನ ಬದುಕಬೇಕೆಂದು ಕಾವ್ಯ ಬರೆಯುತ್ತೇನೆ ಎಂದು ರಾಘವಾಂಕರು ನಮ್ಮ ಪ್ರಾಚೀನ ಸಾಹಿತ್ಯದಲ್ಲಿ ಬಹಳ ಹಿಂದೆಯೇ ಹೇಳಿದ್ದನ್ನು ನೋಡಬಹುದು. ಇಂದಿನ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಬೇಕೆಂದು ಸಾಹಿತಿ ಡಾ. ಸರಕೂ ಕಾಟ್ಕರ್ ಹೇಳಿದರು.
ಅವರು ನಗರದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಕನ್ನಡ ಸಂಘದಿಂದ ಏರ್ಪಡಿಸಿದ ಕನ್ನಡ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.
ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯವು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮಹತ್ವದ ಅಂಗ ಸಂಸ್ಥೆಯಾಗಿದೆ. ಕ.ವಿ.ವಿ. ಆಶ್ರಯದ ಧಾರವಾಡದ ಕೆ.ಸಿ.ಡಿ. ಕಾಲೇಜಿನ ಮಾದರಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳೆಯಬೇಕು. ಕನ್ನಡ ಭಾಷೆ ಮತ್ತು ಸಂಸ್ಕøತಿಯನ್ನು ಬೇಳೆಸಬೇಕಾದರೆ ಕನ್ನಡ ಕಾರ್ಯಕ್ರಮಗಳು ನಡೆಯಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷÀತೆ ವಹಿಸಿದ್ದ ಪ್ರಾಚಾರ್ಯ ಡಾ. ಎಸ್. ಎಮ್. ಗಂಗಾಧರಯ್ಯ ಮಾತನಾಡಿ, ವೇದಿಕೆಯ ಮೂಲಕ ಕನ್ನಡ ಮನಸ್ಸುಗಳನ್ನು ಕಟ್ಟುವ ಕೆಲಸ ನಡೆಯಬೇಕು. ಸಾಹಿತ್ಯದಲ್ಲಿ ಆಸಕ್ತಿ ಮೂಡಿಸುವ ಮೂಲಕ ಸಾಹಿತ್ಯ ರಸಗ್ರಹಿಕೆ ಬಹಳ ಪ್ರಮುಖವಾದ ಅಂಶವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಡಾ. ಸರಜೂ ಕಾಟ್ಕರ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ. ಎಸ್. ಬಿ. ನಾವಿ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ಹನುಮಂತಪ್ಪ ಸಂಜೀವಣ್ಣನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಲ್ಲಪ್ಪ ಜಕ್ಕಣ್ಣವರ ಸ್ವಾಗತಿಸಿದರು. ರೇಣುಕಾ ಬಾಡಾ ಕಾರ್ಯಕ್ರಮ ನಿರೂಪಿಸಿದರು. ಸವಿತಾ ಮಾಳಕ್ಕಣವರ ವಂದಿಸಿದರು.

loading...