ವ್ಯವಸ್ಥಿತ ಖಜಾನೆ ಲೂಟಿಗೆ ಸಿದ್ದರಾಮಯ್ಯ ಸಂಚು ; ಯಡಿಯೂರಪ್ಪ ಆರೋಪ

0
26
loading...

ಬಾಗಲಕೋಟೆ 14 ಃ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಸ್ತೆಗಳ ಸಮೀಕ್ಷೆಯ ಹೆಸರಿನಲ್ಲಿ 175 ಕೋಟಿ ರೂಪಾಯಿ ಹಣವನ್ನು ವ್ಯವಸ್ಥಿತವಾಗಿ ಲೂಟಿ ಮಾಡಲು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಬಾಗಲಕೋಟೆಯ ಬಸವೇಶ್ವರ ಮಂಗಳ ಭವನದಲ್ಲಿ ಉತ್ತರ ಕರ್ನಾಟಕ ಪ್ರದೇಶದ ಬಿಜೆಪಿ ಪಕ್ಷದ ಕಾರ್ಯಕಾರಿಣಿ ಸಭೆ ಹಾಗೂ ಬೂತ್ ಮಟ್ಟದ ಸಶಕ್ತೀಕರಣ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಯಡಿಯೂರಪ್ಪನವರು, ದೇಶದಲ್ಲಿಯೇ ಅತ್ಯಂತ್ರ ಭ್ರಷ್ಟ ಮುಖ್ಯ ಮಂತ್ರಿ ಸಿದ್ದರಾಮಯ್ಯನವರೆಂದು ಹರಿಹಾಯ್ದರು.
ರಾಜ್ಯದ ಹಲವು ಪ್ರದೇಶದಲ್ಲಿ ವರ್ತುಲ ರಸ್ತೆಯ ಸಮೀಕ್ಷೆ ನಡೆಸಲು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು 175 ಕೋಟಿ ರೂಪಾಯಿ ಹಣ ವೆಚ್ಚ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವ ಮೂಲಕ ರಾಜ್ಯಾ ಖಜಾನೆಯನ್ನು ಲೂಟಿ ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಇಂತಹ ಭ್ರಷ್ಟ ಮುಖ್ಯ ಮಂತ್ರಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಕಾರ್ಯಕರ್ತರು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದರು.
ರಾಜ್ಯದ ಕಾಂಗ್ರೆಸ್ ಸರಕಾರ ಎಲ್ಲ ಕ್ಷೇತ್ರಗಳಲ್ಲಿಯೂ ವಿಫಲವಾಗಿದೆ, ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಆಕೊÂ್ರೀಶ ವ್ಯಕ್ತಪಡಿಸಿದ ಯಡಿಯೂರಪ್ಪನವರು ಇದರ ವಿರುದ್ದ ಸರಕಾರದ ವೈಫಲ್ಯವನ್ನು ಮನೆ ಮನೆಗೆ ತಲುಪಿಸುವ, ಭೃಷ್ಟ ಕಾಂಗ್ರೆಸ್ಸಿನ ದುರಾಡಳಿತವನ್ನು ಕೊನೆಗಾಣಿಸಲು ಜನರನ್ನು ಎಚ್ಚರಿಸುವ ಕೆಲಸಕ್ಕೆ ಕಾರ್ಯಕರ್ತರು ಅಣಿಯಾಗಬೇಕು, ನವ್ಹಂಬರ್ 1 ರಿಂದ ಆರಂಭವಾಗುವ ಪರಿವರ್ತನಾ ಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.
ಕೇಂದ್ರದ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯ ರಾಜ್ಯ ಸಚಿವ ರಮೇಶ ಜಿಗಜಿಣಗಿ ಅವರು ಮಾತನಾಡಿ ಕಳೆದ 3 ವರ್ಷಗಳಲ್ಲಿ ನರೇಂದ್ರ ಮೋದಿ ಸರಕಾರ ಜಗತ್ತು ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾರೆ, ಇದು ಕಾರ್ಯಕರ್ತರ ಗೌರವ, ಇದನ್ನು ಸಾಕಾರಗೊಳಿಸಲು ಕರ್ನಾಟಕದಲ್ಲಿ ಬಿಜೆಪಿ ಸರಕಾರ ಬರಬೇಕಿದೆ, ಅದಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.
ಬಿಜೆಪಿ ಉಸ್ತುವಾರಿ ಕಾರ್ಯದರ್ಶಿ ಮುರಲೀಧರರಾವ್, ಪ್ರತಿಪP್ಷÀದ ನಾಯಕರಾದ ಜಗದೀಶ ಶೆಟ್ಟರ, ಕೆ.ಎಸ್. ಈಶ್ವರಪ್ಪ, ಸಂಸದರಾದ ಪಿ.ಸಿ. ಗದ್ದಿಗೌಡರ, ಪ್ರಲ್ಹಾದ ಜೋಶಿ, ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ರಾಜ್ಯ ಉಪಾಧ್ಯP್ಷÀ ಗೋವಿಂದ ಕಾರಜೋಳ, ಸಂಘಟನಾ ಕಾರ್ಯದರ್ಶಿ ಎನ್. ರವಿಕುಮಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಭ್ಯಾಸ ವರ್ಗದಲ್ಲಿ ಸಂಸದರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ ಅವರುಗಳು ಸಾಂಪ್ರದಾಯಕ, ಅಸಾಂಪ್ರದಾಯಕ ಅಭಿಯಾನ, ಹೋರಾಟದ ಮಾರ್ಗಗಳ ಕುರಿತು ಮಾರ್ಗದರ್ಶನ ಮಾಡಿದರು.
ಜಿಲ್ಲಾಧ್ಯP್ಷÀ ಸಿದ್ದು ಸವದಿ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಸಿ.ಸಿ. ಪಾಟೀಲ, ಲP್ಷÀ್ಮಣ ಸವದಿ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ಚಿಕ್ಕನಗೌಡರ, ದೊಡ್ಡನಗೌಡ ಪಾಟೀಲ, ಎಂ.ಕೆ. ಪಟ್ಟಣಶೆಟ್ಟಿ, ಶ್ರೀಕಾಂತ ಕುಲಕರ್ಣಿ, ನಾರಾಯಣಸಾ ಭಾಂಡಗೆ, ಜಿ.ಎಸ್. ನ್ಯಾಮಗೌಡ ಸೇರಿದಂತೆ 96 ವಿಧಾನಸಭಾ ಕ್ಷೇತ್ರದ ಆಯ್ದ ಪ್ರಮುಖರು, ಪದಾಧಿಕಾರಿಗಳು ಅಭ್ಯಾಸ ವರ್ಗದಲ್ಲಿ ಪಾಲ್ಗೊಂಡಿದ್ದಾರೆ.ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರು ಗುರುವಾರ ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬರಗಾಲ, ಕುಡಿಯುವ ನೀರು ಹಾಗೂ ಇತರೆ ವಿಷಯಗಳ ಕುರಿತು ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರೊಂದಿಗೆ ಚರ್ಚಿಸಿದರು. ಇದೇ ಸಮಯದಲ್ಲಿ ಜಿ.ಪಂ ಸಿಇಓ ವಿಕಾಸ ಸುರಳಕರ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಡಿ ಉಪಸ್ಥಿತರಿದ್ದರು.

 

loading...