ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ: ದುರ್ಗೇಶ

0
23
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಬೇಕು. ಶಿಕ್ಷಣದಿಂದ ಎಲ್ಲವನ್ನು ಗೆಲ್ಲಬಹುದು ಇವತ್ತಿನ ದಿನಮಾನಗಳಲ್ಲಿ ಶಿಕ್ಷಣ ಪಡೆಯದೇ ಇದ್ದರೆ ಮನುಷ್ಯ ಬದಕುವುದು ಕಷ್ಟವಾಗಿದೆ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ದುರ್ಗೇಶ ಗೋವಿಂದ ಮೇತ್ರಿ ಹೇಳಿದರು.
ಖಾನಾಪುರ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಛಲವಾದಿ ಮಹಾಸಭಾ ಖಾನಾಪೂರ ತಾಲೂಕು ಘಟಕದಂದ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ ಅವರು. ಡಾ. ಬಿ.ಆರ್ ಅಂಬೇಡ್ಕರ್ ವಿದ್ಯಾರ್ಥಿಗಳಿಗೆ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯಬೇಕು. ದಲಿತ ವ್ಯಕ್ತಿಯಾದ ಕೋವಿಂದ ರಾಮ ರಾಷ್ಟ್ರಪತಿಯಾಗಿದ್ದಾರೆ. ಛಲವಾದಿ ಸಮಾಜ ದೊಡ್ಡ ಶಕ್ತಿ ಬಂದತಾಘಿದೆ ಎಂದರು.
ಇದೇ ಸಂದರ್ಭದಲ್ಲಿ ಛಲವಾದಿ ಸಮಾಜದ ತಾಲೂಕು ಅಧ್ಯಕ್ಷ ಲಕ್ಷ್ಮಣ ಕಾಂಬಳೆ, ಧನಪಾಲ ಅಗಶಿಮನಿ, ನಾರಾಯಣ ಸಾವಂತ, ಗಂಗಾರಾಮ ದೊಡ್ಡಮನಿ ಮತ್ತು ಶೇಖರ ಮೇತ್ರಿ ಮತ್ತಿತರರು ಉಪಸ್ಥಿತರಿದ್ದರು.

loading...