ಹಿಡಕಲ್ ಜಲಾಶಯದಲ್ಲಿ 33 ಟಿಎಂಸಿ ನೀರು ಸಂಗ್ರಹ

0
28
loading...

ಕನ್ನಡಮ್ಮ ಸುದ್ದಿ

ಬೆಳಗಾವಿ: ಬೆಳಗಾವಿ ಮಹಾನಗರ, ಹುಕ್ಕೇರಿ, ಸಂಕೇಶ್ವರ, ಬಾಗಲಕೋಟೆ, ವಿಜಯಪುರ ಜಿಲ್ಲೆಯ ಕುಡಿಯುವ ನೀರು ಪೂರೈಕೆ ಮಾಡುವ ಜೀವನಾಡಿ 51 ಟಿಎಂಸಿ ಒಟ್ಟು ನೀರು ಸಂಗ್ರಹವಾಗುವ ಹುಕ್ಕೇರಿ ತಾಲೂಕಿನಲ್ಲಿ ಘಟಪ್ರಭಾ ನದಿಗೆ ನಿರ್ಮಿಸಿರುವ ಹಿಡಕಲ್ ಜಲಾಶಯದಲ್ಲಿ ಶುಕ್ರವಾರದ ವರೆಗೆ ಡೆಡ್ ಸ್ಟಾಕ್ ಹಿಡಿದು 35.14 ಟಿಎಂಸಿ ನೀರು ಸಂಗ್ರಹವಿದ್ದರೆ ಅದರಲ್ಲಿ 33.12 ಟಿಎಂಸಿ ನೀರು ಬಳಕೆಗೆ ಯೋಗ್ಯವಾಗಿದೆ.
2175 ಪೂಟ ನೀರು ಸಂಗ್ರಹದ ಜಲಾಶಯದಲ್ಲಿ 2153.45 ಪೂಟ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇಷ್ಟೋತ್ತಿಗೆ ಜಲಾಶಯದಲ್ಲಿ 2166.86 ಪೂಟ ನೀರು ಸಂಗ್ರಹವಾಗಿತ್ತು. ಜಲಾಶಯಕ್ಕೆ 613 ಕ್ಯೂಸೆಕ್ಸ್ ನೀರಿನ ಒಳ ಹರಿದು ಬರುತ್ತಿದೆ. ಜಲಾಶಯದಿಂದ 135 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

loading...