83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಚಂಪಾ ಆಯ್ಕೆ

0
75
loading...

ಬೆಂಗಳೂರು:- ಅರಮನೆ ನಗರಿ ಮೈಸೂರಿನಲ್ಲಿ ನವೆಂಬರ್ 24ರಿಂದ 26ರ ವರೆಗೆ ಮೂರು ದಿನಗಳವರೆಗೆ ನಡೆಯಲಿರುವ 83ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರಗತಿಪರ ಚಿಂತಕ, ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ್ (ಚಂಪಾ) ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್‍ನ 101ನೆ ವಾರ್ಷಿಕ ಮಹಾ ಅಧಿವೇಶನದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ನವೆಂಬರ್ 24ರಿಂದ ಮೂರು ದಿನಗಳ ಕಾಲ ಕನ್ನಡದ ಕಂಪು ಸೂಸುವ, ಕನ್ನಡದ ತೇರು ಎಳೆಯುವ, ಕನ್ನಡವನ್ನು ನಭೋಮಂಡಲಕ್ಕೆ ಕೊಂಡೊಯ್ಯುವ ಅದ್ಧೂರಿ ಕಾರ್ಯಕ್ರಮಗಳು ಜರುಗಲಿವೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ರಾಜ್ಯ ಹಾಗೂ ಹೊರಭಾಗಗಳಲ್ಲಿ ಕನ್ನಡಕ್ಕಾಗಿ ಹೋರಾಟ ನಡೆಸಿದ ಚಂಪಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು. ಕರ್ನಾಟಕ ವಿವಿಯಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಚಂಪಾ ಅವರು 1964ರಲ್ಲಿ ಸಂಕ್ರಮಣ ಎಂಬ ಪತ್ರಿಕೆ ಆರಂಭಿಸಿದ್ದರು. ಸಾಹಿತ್ಯಿಕ ಚಟುವಟಿಕೆಗಳ ಜತೆಗೆ ಬಂಡಾಯ ಸಾಹಿತ್ಯದ ಸಂಘಟನೆಯ ಸಂಚಾಲಕರಾಗಿದ್ದರು.

loading...