ಇದೇ 16,17,18 ಬೆಳಗಾವಿಯಲ್ಲಿ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

0
32
loading...

ಕನ್ನಡಮ್ಮ ಸುದ್ದಿ

ಬೆಳಗಾವಿ; ನಗರದಲ್ಲಿ ನಡೆಯಲ್ಲಿರುವ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಶಿಸ್ತಿನಿಂದ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾ ಭವನದಲ್ಲಿ ಅಕ್ಟೋಬರ್ 16,17,18 ಮೂರು ದಿನಗಳ ಕಾಲ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲ್ಲಿರುವ 2017-18 ನೇ ಸಾಲಿನ ರಾಜ್ಯ ಮಟ್ಟದ ಪ್ರೌಢಶಾಲಾ ಅಥ್ಲೆಟಿಕ್ ಕ್ರೀಡಾ ಕೂಟಕ್ಕೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ರಾಜ್ಯದಿಂದ ಬರುವ ಮಕ್ಕಳು ಸರಕಾರಿ ವ್ಯವಸ್ಥೆಯನ್ನು ಬೈಯ್ದುಕೊಳ್ಳದಂತೆ ಕ್ರೀಡಾಕೂಟದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸೂಕ್ತ, ಉಟ,ಉಪಹಾರ,ವಸತಿ ವ್ಯವಸ್ಥೆಯನ್ನು ಕಲ್ಪಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕ್ರೀಡಾಕೂಟದಲ್ಲಿ ಶೇ50 ಹೆಣ್ಣು ಮಕ್ಕಳು ಭಾಗವಹಿಸುತ್ತಾರೆ ಅವರಿಗೆ ಕಲ್ಪಿಸುವ ವಸತಿ ನಿಲಯಗಳಿಗೆ ಪೊಲೀಸ್ ರಕ್ಷಣೆಗೆ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಪೊಲೀಸ್ ಕಮೀಷನರ್ ಅವರಿಗೆ ಪತ್ರ ಬರೆಯುವಂತೆ ಡಿಸಿ ಜಿಯಾವುಲ್ಲಾ ತಿಳಿಸಿದರು.
ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಜಿಲ್ಲೆಯ ಸುಮಾರು 2736 ವಿದ್ಯಾರ್ಥಿಗಳು ಹಾಗೂ 216 ತಂಡದ ವ್ಯವಸ್ಥಾಪಕರು ಭಾಗವಹಿಸಲ್ಲಿದ್ದಾರೆ. ನಗರದ ವಿವಿಧಡೆಯ 30 ಸ್ಥಳಗಳನ್ನು ವಸತಿಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಡಯಟ್ ಪ್ರಾಚಾರ್ಯೆ ಪ್ರಭಾವತಿ ಪಾಟೀಲ, ಡಿಡಿಪಿಐ ಎ.ಬಿ.ಪುಂಡಲೀಕ, ಎಸ್.ಯು.ಜಮಾದಾರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಪ್ಪಾಸಾಹೇಬ ನರಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

loading...