ಗೋವಾ ಸರ್ಕಾರದ ಕನ್ನಡ ವಿರೋಧಿ ನಿಲುವು ಖಂಡನೀಯ: ವಾಟಾಳ್‌

0
29
loading...

ಖಾನಾಪುರ: ಮಹಾದಾಯಿ ಕಣಿವೆಯ ಮೂರೂ ರಾಜ್ಯಗಳು ಕುಡಿಯುವ ನೀರಿನ ವಿಷಯದಲ್ಲಿ ಧಾರಾಳತನವನ್ನು ಪ್ರದರ್ಶಿಸುವ ಮೂಲಕ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ಜನರ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕಿತ್ತು. ಆದರೆ ಗೋವಾ ಸರ್ಕಾರ ಮಹಾದಾಯಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಯೋಚಿಸದೇ ಕನ್ನಡಿಗರಿಗೆ ಅನ್ಯಾಯವೆಸಗುತ್ತಿದೆ. ಜೊತೆಗೆ ವಾಸ್ಕೋದಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸಿ ಕನ್ನಡಿಗರ ಸಹನೆಯನ್ನು ಕೆಣಕುವ ಕೆಲಸ ಮಾಡುತ್ತಿದೆ. ಇದನ್ನು ತೀವ್ರವಾಗಿ ಖಂಡಿಸಲಾಗುವುದು ಎಂದು ಕನ್ನಡ ಚಳುವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಹೇಳಿದರು.
ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಣಕುಂಬಿಯಲ್ಲಿ ರಸ್ತೆ ತಡೆ ನಡೆಸಿ ರಸ್ತೆ ಮೇಲೆ ಮಲಗಿದ ವಾಟಾಳ್‌ ನಾಗರಾಜ್‌ ಹಾಗೂ ಅವರ ಬೆಂಬಲಿಗರನ್ನು ಬಂಧಿಸಿದ ಖಾನಾಪುರ ಪೊಲೀಸರು ಬಳಿಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬೈಲಹೊಂಗಲ ಉಪ ವಿಭಾಗದ ಡಿಎಸ್‌ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

loading...