ಭೀಕರ ರಸ್ತೆ ಅಪಘಾತ: ವಿದ್ಯಾರ್ಥಿಗಳ ದಾರುಣ ಸಾವು

0
20
loading...

ರಾಮನಗರ:- ಬೆಂಗಳೂರು ನಗರದ ಹೊರ ಭಾಗದಲ್ಲಿ ಬೆಳಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದು, ಕಂಟೈನರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ ನಾಲ್ಕು ವಿದ್ಯಾರ್ಥಿಗಳು ದುರ್ಮರಣ ಹೊಂದಿದ್ದಾರೆ.
ರಾಮನಗರ ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಮೊದಲು ದಾಟಿ ಎದುರಿನಿಂದ ಬರುತ್ತಿದ್ದ ಕಂಟೈನರ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳು. ಅವರ ಪೈಕಿ ಇಬ್ಬರು ಯವಕರು ಹಾಗೂ ಇಬ್ಬರು ಯುವತಿಯರು. ಇಬ್ಬರನ್ನು ಕೇರಳ ಮೂಲದ ನಿಕಿತ್ ಜಾಯ್ (21), ಜೋಯಿಲ್ ಜಾಕಬ್ (22) ಎಂದು ಗುರುತಿಸಲಾಗಿದೆ. ಈ ಕುರಿತು ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...