ರಾಜೇಶ್, ನೂಪುರ್ ದಂಪತಿ ಖುಲಾಸೆ

0
24
loading...

ಲಖನೌ:- ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ 14 ವರ್ಷ ಪ್ರಾಯದ ಆರುಷಿ ತಲ್ವಾರ್ ಹಾಗೂ ಹೇಮರಾಜ್ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ದಂಪತಿಯನ್ನು ಗುರುವಾರ ಅಲಹಾಬಾದ್ ಹೈಕೋರ್ಟ್ ಖುಲಾಸೆಗೊಳಿಸಿ ಮಹತ್ವದ ತೀರ್ಪು ನೀಡಿದೆ.
ಆರುಷಿ ಹಾಗೂ ಮನೆ ಕೆಲಸದಾತ ಹೇಮರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂದೆ ಸಿಬಿಐ ವಿಶೇಷ ಕೋರ್ಟ್ ರಾಜೇಶ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದನ್ನು ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅಲಹಬಾದ್ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು.
ಕಳೆದ ಸೆಪ್ಟೆಂಬರ್ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಬಿ.ಕೆ. ನಾರಾಯಣ ಮತ್ತು ನ್ಯಾಯಾಮೂರ್ತಿ ಎ.ಕೆ ಮಿಶ್ರಾ ಅವರನ್ನೊಳಗೊಂಡ ಪೀಠ ತೀರ್ಪನ್ನು ಕಾದಿರಿಸಿತ್ತು. ಇಂದು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.
2008 ಮೇ 16ರಂದು 14 ವರ್ಷ ಪ್ರಾಯದ ಆರುಷಿಯನ್ನು ಮನೆಯಲ್ಲಿಯೇ ಕತ್ತು ಕೊಯ್ದು ಹತ್ಯೆ ಮಾಡಲಾಗಿತ್ತು. ಮತ್ತೆ ಮನೆ ಕೆಲಸದಾತ ಹೇಮರಾಜ್ ಸಹ ಹತ್ಯೆಗೀಡಾಗಿದ್ದ. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿತ್ತು. ಸಿಬಿಐ ದಾಖಲೆಗಳನ್ನು ಹಾಜರುಪಡಿಸುವಲ್ಲಿ ವಿಫಲವಾಗಿದೆ ಎಂದು ಕೋರ್ಟ್ ಹೇಳಿದೆ.

loading...