ಲಾಹೋರ್ ಹೈ ಎಚ್ಚರಿಕೆ

0
20
loading...

ಲಾಹೋರ್:- ಹಫೀಜ್ ಸಯೀದ್ ಉಗ್ರವಾದಿ ಚಟುವಟಿಕೆಯಲ್ಲಿ ಭಾಗಿಯಾಗದ್ದಾನೆ ಎಂಬುವುದನ್ನು ಸಾಬೀತುಪಡಿಸುವ ಸಾಕ್ಷ್ಯಗಳನ್ನು ಹಾಜರುಪಡಿಸದೇ ಇದ್ದಲ್ಲಿ, ಆತನನ್ನು ಬಿಡುಗಡೆ ಮಾಡುತ್ತೇವೆಂದು ಲಾಹೋರ್ ಹೈಕೋರ್ಟ್ ಪಾಕಿಸ್ತಾನ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಸಯೀದ್ ಮತ್ತು ಇತರೆ ನಾಲ್ವರನ್ನು ಗೃಹಬಂಧನಕ್ಕೆ ಒಳಪಡಿಸಿರುವ ಪ್ರಕರಣದ ವಿಚಾರಣೆಯನ್ನು ನಿನ್ನೆ ನಡೆಸಲಾಗುತ್ತಿತ್ತು. ಆಧರೆ, ವಿಚಾರಣೆ ವೇಳೆ ಸರ್ಕಾರಿ ವಕೀಲರು ಗೈರು ಹಾಜರಾಗಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ನ್ಯಾಯಾಲಯ, ಕೇವಲ ಪತ್ರಿಕಾ ವರದಿಗಳನ್ನು ಆಧರಿಸಿ ಯಾವುದೇ ವ್ಯಕ್ತಿಯನ್ನು ಬಂಧನದಲ್ಲಿ ಇಡುವುದು ಸಾಧ್ಯವಿಲ್ಲ ಎಂದು ಹೇಳಿದೆ.
ಕಳೆದ ಜ.31 ರಿಂದೂ ಹಫೀಜ್ ಪಾಕಿಸ್ತಾನದಲ್ಲಿ ಗೃಹ ಬಂಧನದಲ್ಲಿದ್ದಾನೆ. ತನ್ನ ಬಂಧನವನ್ನು ಪ್ರಶ್ನಿಸಿ ಹಫೀಜ್ ಲಾಹೋರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ. ತನ್ನ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲಿದಿದ್ದರೂ ಬಂಧನದಲ್ಲಿ ಇಡಲಾಗಿದೆ ಎಂದು ಹಫೀಜ್ ವಾದಿಸಿದ್ದ. ಈ ಹಿನ್ನಲೆಯಲ್ಲಿ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಆತನ ವಿರುದ್ಧ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಪಾಕಿಸ್ತಾನ ಸರ್ಕಾರಕ್ಕೆ ಸೂಚಿಸಿತ್ತು.

loading...