ಇಂಡೋ-ಚೀನಾ ಗಡಿಯಲ್ಲಿ ಪ್ರಬಲ ಭೂಕಂಪನ

0
15
loading...

ನವದೆಹಲಿ: ಭಾರತ-ಚೀನಾ ಗಡಿ ಭಾಗದಲ್ಲಿ ಶನಿವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚೀನಾ-ಭಾರತ ಗಡಿ ಪ್ರದೇಶವಾದ ಟಿಬೆಟ್ ನಲ್ಲಿ ಭೂಕಂಪನ ಸಂಭವಿಸಿದ್ದು, ಟಿಬೆಟ್ ನ ನ್ಯಿಂಗ್ ಚಿ  ಪ್ರಾಂತ್ಯದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ತಿಳಿದುಬಂದಿದೆ. ಅಂತೆಯೇ ಅರುಣಾಚಲ ಪ್ರದೇಶದಲ್ಲೂ  ಕಂಪನದ ಅನುಭವವಾಗಿದ್ದು, 2 ಬಾರಿ ಭೂಮಿ ಕಂಪಿಸಿದೆ ಎಂದು ಹೇಳಲಾಗಿದೆ.ಆದರೆ ಭೂಕಂಪನದಲ್ಲಿ ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ.

loading...