ಪ್ರಾಂಶುಪಾಲರ ಹುದ್ದೆಗೆ ಶೀಘ್ರದಲ್ಲಿ ನೇಮಕಾತಿ ಆದೇಶ ಹೊರಡಿಸಲಾಗುತ್ತದೆ

0
32
loading...

ಸಮಾಲೋಚನಾ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳೀಕೆ
ಕನ್ನಡಮ್ಮ ಸುದ್ದಿ-ಬೆಳಗಾವಿ: ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಂಶುಪಾಲರ ಹುದ್ದೆಗಳನ್ನು ಅತೀ ಶೀಘ್ರದಲ್ಲಿಯೇ ತುಂಬಿಕೊಳ್ಳಲಾಗುವುದೆಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.
ಗುರುವಾರ ನಗರದ ಕೆಎಲ್‍ಇಯ ಜಿರಗಿ ಸಭಾ ಭವನದಲ್ಲಿ ಕರ್ನಾಟಕ ಖಾಸಗಿ ಆಡಳಿತ ಮಂಡಳಿಗಳ ಹಾಗೂ ನೌಕರರ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು. ಪ್ರತಿ ಕಾಲೇಜಿನಲ್ಲಿ ಪ್ರಾಂಶುಪಾಲರ ಕೊರತೆ ಕಾಡುತ್ತಿದ್ದು, ಸಧ್ಯದಲ್ಲಿಯೆ ತುಂಬಿಕೊಳ್ಳಲು ಆದೇಶ ಹೊರಡಿಸುವುದಾಗಿ ಭರವಸೆ ನೀಡಿದರು.
ಸಾಮಾನ್ಯ ಖಾಸಗಿ ಆಡಳಿತ ಸಂಸ್ಥೆಗಳಾದ 89 ಪದವಿ ಕಾಲೇಜುಗಳು, 33 ಪಾಲಿಟೆಕ್ನಿಕ್ ಕಾಲೇಜುಗಳಿಗೆ ಆರ್ಥಿಕ ಅನುದಾನವನ್ನು ನೀಡಿದೆ. ಹೈದರಬಾದ್ ಕರ್ನಾಟಕ ಶೈಕ್ಷಣಿಕವಾಗಿ ಹಿಂದೆ ಉಳಿದಿದ್ದು, ಇದನ್ನು ಅಭಿವೃದ್ಧಿ ಮಾಡಬೇಕು ಎಂಬ ದೃಷ್ಟಿಯಿಂದ ವಿಶೇಷವಾಗಿ 1500 ಕೋಟಿ ಅನುದಾನವನ್ನು ನೀಡಲಾಗಿದೆ. ಇನ್ನು ಕೇಂದ್ರಿಯ ವಿಶ್ವವಿದ್ಯಾಲಯಕ್ಕೆ ಡಾ. ಬಿ. ಆರ್. ಅಂಬೇಡ್ಕರ ಹೆಸರನ್ನು ಇಡಬೇಕು ಎಂದು ಕೇಂದ್ರ ಸಕಾರ ನಿರ್ಧರಿಸಿದ್ದು, ಅದರಂತೆ ರಾಜ್ಯ ಸರ್ಕಾರ ಗುಲಬರ್ಗ ವಿಶ್ವವಿದ್ಯಾಲಯಕ್ಕೆ ಬಸವೇಶ್ವರ ಹೆಸರನ್ನು ನಾಮಕರಣ ಮಾಡಲಾಗುತ್ತದೆ.
ಪ್ರತಿವರ್ಷ ನಮ್ಮ ಸರ್ಕಾರ ಬಜೆಟ್ ಮಂಡನೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ 30 ಸಾವಿರ ಕೋಟಿ ಅನುದಾನ ನೀಡುತ್ತಿದೆ. ಇದರಲ್ಲಿ 20 ಸಾವಿರ ಕೋಟಿ ಸಬ್ಸಿಡಿಗೆ ಬಳಕೆಯಾಗುತ್ತಿದ್ದು, ರಾಜ್ಯದಲ್ಲೇ ಶೇ. 50 ರಷ್ಟು ಉದ್ಯೋಗಿಗಳು ಶಿಕ್ಷಣ ಕ್ಷೇತ್ರದಲ್ಲಿಯೆ ಕಾರ್ಯನಿರ್ವಸುತ್ತಿರುವುದರಿಂದ ಅನುದಾನ ಸಮರ್ಪಕವಾಗಿ ಸಾಕಾಗುತ್ತಿಲ್ಲ ಎಂದರು.
ಪ್ರಾಥಮಿಕ ಹಾಗೂ ಮಾದ್ಯಮಿಕ ಶಿಕ್ಷಣ ಇಲಾಖೆ ಸಚಿವ ತನ್ವೀರ ಸೇಠ್ ಮಾತನಾಡಿ, 1987 ರಿಂದ 1995ರ ಒಳಗೆ ಪ್ರಾರಂಭವಾದ ಪ್ರಾಥಮಿಕ ಹಾಗೂ ಮಾದ್ಯಮಿಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹಣಕಾಸಿನ ಅನುಮೋದನೆ ನೀಡಲಾಗಿದ್ದು, ಸರ್ಕಾರದ ಉದ್ದೇಶ ಎಲ್ಲಾ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆತು ಉತ್ತಮ ರಾಷ್ಟ್ರ ನಿರ್ಮಾಣ ಮಾಡುವುದಾಗಿದೆ.
ಇನ್ನು ಅನುದಾನಿತ ಮಂಡಳಿಯ ಬೇಡಿಕೆಯಾದ ಡಿ ಗ್ರುಪ್ ನೌಕರರನ್ನು ನೇಮಕಾತಿ ಮಾಡಿಕೊಳ್ಳಬೇಕು. ಎಂಬ ಆದಾರದ ಮೇಲೆ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಹೊರಗುತ್ತಿಗೆ ಆದಾರದ ಮೇಲೆ ನೇಮಕ ಮಾಡಿಕೊಳ್ಳಬೇಕು. ಅದಕ್ಕೆ ಸರ್ಕಾರದಿಂದ ಅನುದಾವನ್ನು ನೀಡಲಾವುದೆಂದು ಹೇಳಿದರು.
ಕಾಲ್ಪನಿಕ ವೇತನವನ್ನು ಜಾರಿಗೆ ಮಾಡಬೇಕು ಎಂಬುದು ಅನುದಾನಿತ ಶಿಕ್ಷಕರ ಬೇಡಿಕೆಯಾಗಿದೆ ಹಾಗಾಗಿ ಈ ಬೇಡಿಕೆಯನ್ನು ಸಿಎಂ ಜೊತೆ ಮಾತನಾಡಿ ನೀಡಲಿಕ್ಕೆ ಬರುತ್ತೊ ಇಲ್ಲವೊ ಎಂಬುದನ್ನು ವಿಚಾರ ಮಾಡಲಾಗುತ್ತದೆ. ಪ್ರತಿ ಶಾಲೆಯಲ್ಲಿ 60 ವಿದ್ಯಾರ್ಥಿಗಳಿಗೊಬ್ಬ ದೈಹಿಕ ಶಿಕ್ಷಣ ಶಿಕ್ಷಕರನ್ನು ಸರ್ಕಾರಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ನೇಮಕಾತಿ ಮಾಡುವಂತೆ ಆದೇಶವನ್ನು ಹೊರಡಿಸಲಾಗುತ್ತದೆ. ಇನ್ನು ಆಡಳಿತ ಮಂಡಳಿ ಹಾಗೂ ಬೋಧಕ ಸಿಬ್ಬಂದಿಗಳ ಮಧ್ಯ ಇರುಸು ಮುರಸು ಬಂದು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಕೆಲ ಸಂಸ್ಥೆಗಳು ಹಿಂದೆ ಬಿಳ್ಳುತ್ತಿವೆ ಅಂತಹ ಸಂಸ್ಥೆಗಳು ಇನ್ನುಮುಂದಾದರೂ ಸುದಾರಿಸಿಕೊಳ್ಳಬೇಕು ಇಲ್ಲದಿದ್ದರೆ ಅಂತಹ ಸಂಸ್ಥೆ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದರು.
ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮಾತನಾಡಿ, ಗಡಿ ನಾಡ ಜಿಲ್ಲೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಖಾಸಗಿ ಸಂಸ್ಥೆಗಳು ಕಾರ್ಯ ಶ್ಲಾಘನೀಯವಾಗಿದೆ. ಹಾಗಾಗಿ ಅಂತಹ ಸಂಸ್ಥೆಗಳ ಬಗ್ಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಿ ಮೂಲ ಭೂತಸೌಲಭ್ಯಗಳನ್ನು ಒದಗಿಸಬೇಕು ಎಂದರು.
ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್ ವಿ. ಸಂಕನೂರು ಮಾತನಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಖಾಸಗಿ ಆಡಳಿತ ಮಂಡಳಿ ವ್ಯವಸ್ಥಾಪಕರು, ಶಿಕ್ಷಕರು ಸೇರಿದಂತೆ ಇತರರು ಇದ್ದರು. ಶಿಕ್ಷಕ ಡಾ. ಮಹೇಶ ಗುರನಗೌಡರ ನಿರೂಪಿಸಿದರು. ವಿಧಾನ ಪರಿಷತ್ ಸದಸ್ಯ ಮಾಂತೇಶ ಕವಟಗಿಮಠ ಸ್ವಾಗತಿಸಿದರು. ವಿಧಾನ ಪರಿಷತ್ ಸದಸ್ಯ ಅರುಣ ಶಾಹಪೂರ ವಂದಿಸಿದರು.

 

 

loading...