ವೈದ್ಯರು ಮಷ್ಕರ ಕೈ ಬಿಡುವಂತೆ ಪ್ರತಿಭಟನೆ

0
45
loading...

ಕನ್ನಡಮ್ಮ ಸುದ್ದಿ
ಬೆಳಗಾವಿ : ಕಳೆದ ನಾಲ್ಕು ದಿನಗಳಿಂದ ಖಾಸಗಿ ಆಸ್ಪತ್ರೆಗಳ ವೈದ್ಯರು ನಡೆಸುತ್ತಿರುವ ಮುಷ್ಕರವನ್ನು ಬಿಟ್ಟು ಆಸ್ಪತ್ರೆಗಳಿಗೆ ಹೋಗಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿ ಗುರುವಾರ ಜಯ ಕರ್ನಾಟಕ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು.
ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಡ ಜೀವಗಳು ಬಲಿಯಾಗುತ್ತಿದ್ದು ಅದರ ಹೊಣೆಯನ್ನು ವೈದ್ಯರು ಹೊರಬೇಕಾಗುತ್ತದೆ. ತಕ್ಷಣವೇ ಸರಕಾರದ ಜೊತೆಗೆ ಶಾಂತಿಯುತವಾಗಿ ಸಮಸ್ಯೆಯನ್ನು ಬಗೆ ಹರಿಸಿಕೊಂಡು ವೈದ್ಯರುಗಳನ್ನು ಸೇವಾ ಕಾರ್ಯಕ್ಕೆ ಆಸ್ಪತ್ರೆಗಳಿಗೆ ಹೋಗಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಸಂಘಟನೆಯ ಜಿಲ್ಲಾಧ್ಯಕ್ಷ ಸಂಜಯ ರಜಪೂತ, ಯರಗುಂಟೇಶ್ವರ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

loading...